Wednesday 14th, May 2025
canara news

'ಕಲ್ಲಡ್ಕ ಶಾಲೆಗೆ ಅನುದಾನ ನಿಲ್ಲಿಸಿದ್ದಕ್ಕೆ ಮೂಕಾಂಬಿಕೆ ಕೃಪೆಯಿದೆ'; ರೈ

Published On : 02 Mar 2018   |  Reported By : canaranews network


ಮಂಗಳೂರು: ಕಲ್ಲಡ್ಕದ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಬಿಸಿಯೂಟದ ಅನುದಾನ ಕಡಿತಗೊಳಿಸಿದ್ದು ನಾನೇ. ಆ ಕೆಲಸ ಮಾಡಿದ್ದಕ್ಕೆ ನನಗೆ ಕೊಲ್ಲೂರು ಮೂಕಾಂಬಿಕೆಯ ಕೃಪೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮರ್ತನೆ ಮಾಡಿಕೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ. ರೋಡ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಲ್ಲಡ್ಕ ಶಾಲೆಗಳಿಗೆ ಅನುದಾನ ಕಡಿತಗೊಳಿಸಿದ ವಿಚಾರವನ್ನು ಸಮರ್ಥಿಸಿಕೊಂಡರು .

ದೇವಸ್ಥಾನದ ಹುಂಡಿಗೆ ಭಕ್ತರು ಹಾಕುತ್ತಿದ್ದ ಹಣ ಕೇವಲ ಎರಡು ಶಾಲೆಗೆ ಹೋಗುತ್ತಿತ್ತು ಎಂದಿದ್ದಾರೆ.ತಾಲೂಕಿನಲ್ಲಿ 332 ಅನುದಾನಿತ ಶಾಲೆಗಳಿವೆ. ಆದರೆ ಈ ಎರಡು ಶಾಲೆಗಳಿಗೆ ಮಾತ್ರ ತಿಂಗಳಿಗೆ ನಾಲ್ಕು ಲಕ್ಷ ರುಪಾಯಿ ಸಂದಾಯ ಆಗುತ್ತಿತ್ತು. ಈ ತಾರತಮ್ಯ ಯಾಕೆ ಎಂಬ ಕಾರಣಕ್ಕೆ ಕಡಿತಗೊಳಿಸಿದ್ದೇನೆ ಎಂದು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು. ಹೀಗೆ ನಾನು ಮಾಡಿದ್ದು ತಪ್ಪಾ ಎಂದು ಪ್ರಶ್ನಿಸಿದ ಅವರು, ಆ ಕೆಲಸ ಮಾಡಿದ್ದಕ್ಕೆ ನನಗೆ ಕೊಲ್ಲೂರು ಮೂಕಾಂಬಿಕೆಯ ಕೃಪೆಯಿದೆ ಎಂದು ಅವರು ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here