Wednesday 14th, May 2025
canara news

ಶೂಟೌಟ್ ಪ್ರಕರಣ – ಭೂಗತ ಪಾತಕಿ ಕಲಿ ಯೋಗೀಶ್ ಸಹಚರನ ಬಂಧನ

Published On : 05 Mar 2018   |  Reported By : canaranews network


ಮಂಗಳೂರು: ಮಂಗಳೂರಿನಲ್ಲಿ ನಡೆದ ಸರಣಿ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೂಗತ ಪಾತಕಿ ಕಲಿ ಯೋಗೀಶ್ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಳೆಯಂಗಡಿ ಹರಿಪಾದೆ ಕೊಯ್ಕುಡೆ ಗ್ರಾಮದ ನಿವಾಸಿ ದಿನೇಶ್ (35) ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ನಡೆದ ಸರಣಿ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಮನೋಜ್ ಕುಮಾರ್ ಮತ್ತು ಚಂದ್ರಶೇಖರನನ್ನು ಬಂಧಿಸಿದ್ದರು. ಬಂಧಿತರಿಂದ ಪಿಸ್ತೂಲ್, ಸಜೀವ ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಉದ್ಯಮಿಗಳ ಮಾಹಿತಿಯನ್ನು ಕಲಿ ಯೋಗೀಶ್ ಗೆ ನೀಡುತ್ತಿದ್ದ ತೇಜ್ ಪಾಲ್ನನ್ನು ಬಂಧಿಸಲಾಗಿತ್ತು.ಈಗ ಬಂಧಿಸಲಾಗಿರುವ ದಿನೇಶ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಭೂಗತ ಪಾತಕಿಯೊಂದಿಗೆ ಸಂಪರ್ಕವಿರುವ ವ್ಯಕ್ತಿಗಳ ಮಾಹಿತಿಯನ್ನು ಕಲೆ ಹಾಕುತ್ತಿರುವ ಪೊಲೀಸರು ಉಳಿದ ಆರೋಪಿಗಳ ಪತ್ತೆ ಕಾರ್ಯವನ್ನು ಮುಂದುವರೆಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here