Friday 29th, March 2024
canara news

ಮಂಗಳೂಗೆ ನೂತನ ಮೇಯರ್, ಉಪಮೇಯರ್ ಆಯ್ಕೆ

Published On : 09 Mar 2018   |  Reported By : canaranews network   |  Pic On: Photo credit : The Hindu


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಭಾಸ್ಕರ್ ಮೊಯ್ಲಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಮಹಮ್ಮದ್ ಕುಂಜತ್ತಬೈಲ್ ಅವರನ್ನು ಆಯ್ಕೆ ಮಾಡಲಾಗಿದೆ.ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ಮೇಯರ್ ಹಾಗೂ ಉಪಮೇಯರ್ ಚುನಾವಣಾ ಪ್ರಕ್ರಿಯೆ ನಡೆಯಿತು . ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಕಳಸದ್ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಭಾಸ್ಕರ್ ಮೊಯ್ಲಿ ಹಾಗು ಉಪಮೇಯರ್ ಆಗಿ ಮಹಮ್ಮದ್ ಕುಂಜತ್ತಬೈಲ್ ಅವರನ್ನು ಆಯ್ಕೆ ಮಾಡಲಾಯಿತು.ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಭಾಸ್ಕರ್ ಮೊಯ್ಲಿ ಅವರಿಗೆ 37 ಮತಗಳು ದೊರೆತರೆ ಬಿಜೆಪಿಯ ಸುರೇಂದ್ರ ಅವರಿಗೆ 19 ಮತಗಳು ದೊರೆತವು.

ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಹಮ್ಮದ್ ಕುಂಜತ್ತಬೈಲ್ ಅವರು 37 ಮತಗಳನ್ನು ಪಡೆದರೆ ಬಿಜೆಪಿಯ ಮೀರಾ ಕರ್ಕೇರಾ 19 ಮತ ಪಡೆದರು.ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದ ಪ್ರಸ್ತುತ ಸಾಲಿನ 5ನೇ ಹಾಗೂ ಕೊನೆಯ ಅವಧಿ ಇದಾಗಿದೆ. ಈ ಹಿನ್ನೆಲೆಯಲ್ಲಿ ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು.ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ ಸದಸ್ಯ ಭಾಸ್ಕರ ಮೊಯ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿಯವರ ಸಂಬಂಧಿಯಾಗಿದ್ದು ಈ ಹಿಂದೆ ಕೂಡ ಮೇಯರ್ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು. ಕೊನೆಯ ಅವಧಿಯಲ್ಲಾದರೂ ಮೇಯರ್ ಸ್ಥಾನ ತಮಗೆ ದೊರಕಲೇಬೇಕೆಂದು ಭಾರೀ ಪ್ರಯತ್ನ ಪಟ್ಟಿದ್ದರು. ವೀರಪ್ಪ ಮೊಯ್ಲಿಯವರ ಪ್ರಭಾವದಿಂದ ಭಾಸ್ಕರ ಮೊಯ್ಲಿಯವರು ಮೇಯರ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here