Wednesday 24th, April 2024
canara news

೨೦೦೯ರ ಮಂಗಳೂರು ಪಬ್ ದಾಳಿ ಪ್ರಕರಣ; ೨೫ ಆರೋಪಿಗಳು ಖುಲಾಸೆ , ಸಿಹಿ ಹಂಚಿ ಸಂಭ್ರಮಾಚರಣೆ

Published On : 13 Mar 2018   |  Reported By : canaranews network


ಮಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ 2009 ರ ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನ್ಯಾಯಾಲಯ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಈ ಹಿನ್ನಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದಲ್ಲದೇ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಜೆಎಂಎಫ್ ಸಿ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ್ , ಸುಭಾಷ್ ಪಡೀಲ್ ಸೇರಿದಂತೆ ಎಲ್ಲಾ 25 ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, "2009 ಜನವರಿ 24ರಂದು ಅಮ್ನೇಶಿಯಾ ಪಬ್ ಮೇಲೆ ದಾಳಿ ನಡೆದಿತ್ತು. ಇದರಲ್ಲಿ 30 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೆಎಂಎಫ್ ಸಿ 3ನೇ ನ್ಯಾಯಾಲಯ 25 ಜನರನ್ನು ಖುಲಾಸೆಗೊಳಿಸಿದೆ. ಇದು ಸತ್ಯಕ್ಕೆ ಸಂದ ಜಯ," ಎಂದು ಹೇಳಿದರು.ಆರೋಪ ಹೊಂದಿದ್ದ ಮೂವರು ವಿದೇಶಕ್ಕೆ ತೆರಳಿದ್ದು, ಇಬ್ಬರು ಮೃತ ಪಟ್ಟಿದ್ದಾರೆ. ಈ ಪ್ರಕರಣದಲ್ಲಿ 9 ಸೆಕ್ಷನ್ ಗಳನ್ನು ಹಾಕಲಾಗಿತ್ತು. ಈ ಘಟನೆಯಲ್ಲಿ ನಾನು ಭಾಗಿಯಾಗಿರಲಿಲ್ಲ ಆದರು ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಯಿತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಈ ಘಟನೆ ನಡೆಯುವ ಸಂದರ್ಭದಲ್ಲಿ ನಾನು ಮಹಾರಾಷ್ಟ್ರದ ಪುಣೆಯ ಸಮ್ಮೇಳನ ಒಂದರಲ್ಲಿ ಭಾಗವಹಿಸಿದ್ದೆ. ಅಲ್ಲಿಂದ ಹಿಂತಿರುಗಿದಾಗ ನನ್ನನ್ನು ಬಂಧಿಸಿದ್ದರು. 16 ದಿನ ನನ್ನನ್ನು ಜೈಲಿನಲ್ಲಿಟ್ಟು ಮಾನಸಿಕ, ದೈಹಿಕ ಹಿಂಸೆ ನೀಡಿದ ಅಂದಿನ ಬಿಜೆಪಿ ಸರಕಾರಕ್ಕೆ ಧಿಕ್ಕಾರ ಎಂದು ಅವರು ಕಿಡಿಕಾರಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here