Wednesday 14th, May 2025
canara news

ಅಂತರ ಜಿಲ್ಲಾ ದೇವಸ್ಥಾನ ಕಳವು ಜಾಲ ಬೇಧಿಸಿದ ಮಂಗಳೂರು ಪೊಲೀಸರು

Published On : 13 Mar 2018   |  Reported By : canaranews network


ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನ ಕಳವು, ಸುಲಿಗೆ, ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಮಂಗಳೂರಿನ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ಜಿಲ್ಲೆಯ ನವೀನ್ ಕುಮಾರ್ ಮತ್ತು ಬೆಂಗಳೂರಿನ ವೆಂಕಟೇಶ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ಬೈಕ್, ಮಾಂಗಲ್ಯ ಸರ ಸೇರಿದಂತೆ ಒಟ್ಟು 2 .45 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಸರಕಾರಿ ವಸತಿ ಗೃಹಗಳ ಕಳ್ಳತನ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು ಆರೋಪಿಗಳು 2017 ಜುಲೈಯಲ್ಲಿ ಮುಲ್ಕಿಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಗುತ್ತಕಾಡು ಮೂಕಾಂಬಿಕಾ ದೇವಸ್ಥಾನದಲ್ಲಿ ನಗ ನಗದು ಕಳವುಗೈದಿದ್ದರು.

ಅಲ್ಲದೆ 2017 ರಲ್ಲಿ ಬೆಂಗಳೂರಿನ ದಾಬಸ್ ಪೇಟೆ ಪೂಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಗೂ 2018ರಲ್ಲಿ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೋಟಾರು ಸೈಕಲ್ ಕಳವುಗೈದಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪೈಕಿ ನವೀನ್ ಕುಮಾರ್ ತನ್ನ ಮೊಬೈಲ್ ನಲ್ಲಿ ದೇವಸ್ಥಾನಗಳನ್ನು ಗೂಗಲ್ ನಲ್ಲಿ ಸರ್ಚ್ ಮಾಡಿ ರೂಟ್ ಮ್ಯಾಪ್ ಮೂಲಕ ದೇವಸ್ಥಾನಗಳನ್ನು ಗುರುತಿಸುತ್ತಿದ್ದ. ನಂತರ ಆ ದೇವಾಲಯಗಳಿಗೆ ಭೇಟಿ ಕೊಟ್ಟು ಕಳ್ಳತನಕ್ಕೆ ಸಂಚು ರೂಪಿಸಿ ರಾತ್ರಿ ಸಮಯದಲ್ಲಿ ಈ ಇಬ್ಬರು ಆರೋಪಿಗಳು ಕಳವು ನಡೆಸುತ್ತಿದ್ದರು ಎಂದು ಹೇಳಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here