Wednesday 14th, May 2025
canara news

ಓಡಿಹೋದ ಕಳ್ಳ ಉದ್ಯಮಿಗಳನ್ನು ಹಿಡಿದುತನ್ನಿ. : ವಿಕಾಸ್ ಹೆಗ್ಡೆ

Published On : 14 Mar 2018   |  Reported By : Bernard Dcosta


ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿಯವರು ಇದೀಗ ಪದವೀಧರ ಯುವಕರ ಕುರಿತು ಪಕೋಡಾ ಮಾರಿ 200 ರೂಪಾಯಿ ಸಂಪಾದಿಸುವಂತೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ. ಸ್ವಿಸ್‍ಬ್ಯಾಂಕ್‍ನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ಮರಳಿ ತಂದು ಪ್ರತಿಯೊಬ್ಬರ ಖಾತೆಗೆ ತಲಾ 15ಲಕ್ಷ ಹಾಕುವುದಾಗಿ ಹೇಳಿದ್ದರು. ಆದರೆ ಈಗ ದೇಶದ ದೊಡ್ಡ ದೊಡ್ಡ ಉದ್ಯಮಿಗಳಾದ ಲಲಿತ್ ಮೋದಿ, ವಿಜಯ ಮಲ್ಯ, ನೀರವ್ ಮೋದಿ ಮುಂತಾದವರು ಲಕ್ಷಾಂತರ ಕೋಟಿ ಹಣವನ್ನು ಬ್ಯಾಂಕಿಗೆ ಪಂಗನಾಮ ಹಾಕಿ ದೇಶ ಬಿಟ್ಟು ಓಡಿ ಹೋಗುತ್ತಿದ್ದರೂ ಕೂಡಾ ನಮ್ಮ ಪ್ರಧಾನಿ ಮೋದಿಯವರು ಏನೂ ಗೊತ್ತಿಲ್ಲದವರಂತೆ ವರ್ತಿಸುವ ಮೂಲಕ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿಯವರಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನನ್ನ ವಿನಂತಿಯೇನೆಂದರೆ ತಾವು ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಬಡವರ ಖಾತೆಗೆ ಹಾಕದಿದ್ದರು ಚಿಂತೆಯಿಲ್ಲ. ಆದರೆ ದೇಶದ ಜನಸಾಮಾನ್ಯರ ಹಣವನ್ನು ನುಂಗಿ ಓಡಿಹೋದ ಆ ಕಳ್ಳ ಉದ್ಯಮಿಗಳನ್ನು ಹಿಡಿದುತನ್ನಿ. ಅದೇ ಈ ದೇಶದ ಜನಸಾಮಾನ್ಯರಿಗೆ ಪ್ರಧಾನಿಯಾಗಿ ತಾವು ಮಾಡುವ ಮಹಾ ಉಪಕಾರವಾಗುತ್ತದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿಕಾಸ್ ಹೆÀಗ್ಡೆ ಹೇಳಿದ್ದಾರೆ.

 

ಅವರು ನಿನ್ನೆ ಸಂಜೆ ಕೋಟ ಬ್ಲಾಕ್‍ನ ಆವರ್ಸೆ ಗ್ರಾ.ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಇಂಟಕ್ ರಾಜ್ಯ ಅಧ್ಯಕ್ಷ ರಾಕೇಶ್ ಮಲ್ಲಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಹಿಂದುಳಿದ ವರ್ಗ ರಾಜ್ಯ ಉಪಾಧ್ಯಕ್ಷ ಮಾಣಿ ಗೋಪಾಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಾಂಗ್ರೆಸ್ ಐಟಿಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೆಳ್ವೆ ಸತೀಶ್ ಕಿಣಿ, ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ರಟ್ಟಾಡಿ ಸಂಪತ್ ಕುಮಾರ್ ಶೆಟ್ಟಿ, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಕಿಶೋರ್ ಶೆಟ್ಟಿ, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ಆವರ್ಸೆ ಹಿಲಿಯಾಣ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಅಧ್ಯಕ್ಷ ಮಹಮ್ಮದ್ ಸಮದ್, ಇಂಟಕ್‍ನ ಪ್ರಭಾಕರ ಶೆಟ್ಟಿ, ಆವರ್ಸೆ ಗ್ರಾ.ಪಂ.ಸದಸ್ಯರಾದ ದಿವಾಕರ ಗಾಣಿಗ, ಜನಾರ್ದನ ಆಚಾರ್ಯ, ಜಯರಾಮ ಶೆಟ್ಟಿ, ಶಂಕರ ಪೂಜಾರಿ ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here