Wednesday 14th, May 2025
canara news

ಮಂಗಳೂರು ಶೂಟೌಟ್ ಪ್ರಕರಣ : ಕಲಿ ಯೋಗೀಶ್ ನ ಸಹಚರ ಅರೆಸ್ಟ

Published On : 15 Mar 2018   |  Reported By : canaranews network


ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದಲ್ಲಿ ನಡೆದ ಸರಣಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಕಲಿ ಯೋಗೀಶ್ ಸಹಚರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಣಿ ಶೂಟೌಟ್ ಪ್ರಕರಣದ ಕುರಿತು ತನಿಖೆ ಮುಂದುವರಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಕಾಸರಗೋಡು ನಿವಾಸಿ ಮೊಹಮ್ಮದ್ ಹನೀಫ್ (35) ಎಂಬುವನನ್ನು ಬಂಧಿಸಿದ್ದಾರೆ.

ಈತ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಸಂಜೀವ ಶೆಟ್ಟಿ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗಿದೆ.ಬಂಧಿತ ಮೊಹಮ್ಮದ್ ಹನೀಫ್ , ಕಲಿ ಯೋಗೀಶನ ಜೊತೆ ನೇರ ಸಂಪರ್ಕದಲ್ಲಿ ಇದ್ದ ಎಂದು ಆರೋಪಿಸಲಾಗಿದ್ದು, ಈತನ ವಿರುದ್ದ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದರೋಡೆ, ಕೊಲೆ , ಬೆದರಿಕೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಫ್ತಾ ಹಣಕ್ಕಾಗಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here