Wednesday 14th, May 2025
canara news

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ

Published On : 15 Mar 2018   |  Reported By : Rons Bantwal


ಇದೇ ಬರುವ ದಿನಾಂಕ: 17.03.2018 ರ ಶನಿವಾರದಂದು ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ“UNISOIREE - 2018” ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಸಚಿವರಾದ ಪ್ರೊ.ಕೆ.ಚಿನ್ನಪ್ಪ ಗೌಡ ನೆರವೇರಿಸಲಿರುವರು. ಮುಖ್ಯ ಅತಿಥಿಯಾಗಿ ನಿಟ್ಟೆ ವಿಶ್ವವಿದ್ಯಾನಿಲಯ ಕೆ.ಎಸ್.ಹೆಗ್ಗಡೆ ಮೆಡಿಕಲ್ ಅಕಾಡೆಮಿಯ ಮನಶಾಸ್ತ್ರ ವಿಭಾಗದ ಡಾ. ಶ್ರೀನಿವಾಸ ಭಟ್ ಉಂಡಾರು ಇವರು ಭಾಷಣ ಮಾಡಲಿರುವರು.

 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸುಭಾಷಿಣಿ ಶ್ರೀವತ್ಸರವರು ವಹಿಸಲಿದ್ದಾರೆ. ಸಂಧ್ಯಾ ವೇಳೆ ಘಂಟೆ 5.30ಕ್ಕೆ ಸರಿಯಾಗಿ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವು ನಡೆಯಲಿದ್ದು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಯ ಬಹುಮಾನ ವಿತರಣೆಯ ನಂತರ ವಿದ್ಯಾರ್ಥಿಗಳ ವಿವಿಧ ವಿನೋದಾವಳಿ ಪ್ರದರ್ಶನವಿದ್ದು ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here