Monday 29th, April 2024
canara news

ಮಂಗಳೂರಿನಲ್ಲಿ ಗುಜರಿ ಅಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ

Published On : 18 Mar 2018   |  Reported By : canaranews network


ಮಂಗಳೂರು: ಮಂಗಳೂರಿನ ಬಂದರು ಪ್ರದೇಶದಲ್ಲಿ ಗುಜರಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಗುಜರಿ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಬೂದಿಯಾಗಿವೆ.

ಬಂದರು ಪ್ರದೇಶದ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಬೆಂಕಿ ಹೊತ್ತಿಕೊಂಡು, ಸುತ್ತಲ ಪರಿಸರದಲ್ಲಿ ಆವರಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ಬೆಂಕಿ ನಂದಿಸಲು ಶ್ರಮಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆ ಶ್ರಮಿಸಿದ ಬಳಿಕ ಬೆಂಕಿ ನಂದಿಸಲಾಗಿದೆ.ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here