Friday 3rd, May 2024
canara news

ಮಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ ಭೇದಿಸಿದ ಸಿಸಿಬಿ ಪೊಲೀಸರು

Published On : 20 Mar 2018   |  Reported By : canaranews network


ಮಂಗಳೂರು: ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಟಿ.ಸಿ. ರಸ್ತೆಯಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೈನ್ಸ್ (MITS) ಎಂಬ ಹೆಸರಿನ ಸಂಸ್ಥೆಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತೊಕ್ಕೊಟ್ಟು ನಿವಾಸಿಗಳಾದ ಅಸ್ಕಾನ್ ಶೇಖ್ (25) ಹಾಗೂ ಅಸ್ರಾರುದ್ದೀನ್ (26) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ಮೊಬೈಲ್ ಫೋನ್ ಹಾಗು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಪ್ರಕರಣ ಪ್ರಮುಖ ಆರೋಪಿ ತೊಕ್ಕೊಟ್ಟು ನಿವಾಸಿ ಗೋಡ್ವಿನ್ ಡಿ ಸೋಜಾ ಎಂಬಾತನನ್ನು ಬಂಧಿಸಿದ್ದರು. ಆದರೆ ಗೋಡ್ವೀನ್ ಬಂಧನ ಆದ ಮಾಹಿತಿ ಪಡೆಯುತ್ತಿದ್ದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಅಸ್ಕಾನ್ ಶೇಖ್ ಹಾಗು ಅಸ್ರಾರುದ್ದೀನ್ ತಲೆಮರೆಸಿಕೊಂಡಿದ್ದರು.ಆರೋಪಿ ಅಸ್ಕಾನ್ ಶೇಖ್ ಎಂಐಟಿಎಸ್ ಸಂಸ್ಥೆಯನ್ನು ನಡೆಸುತ್ತಿದ್ದು, 2016 ರಿಂದ ಎಸ್ಎಸ್ಎಲ್ ಸಿ, ಪಿಯುಸಿ, ಡಿಗ್ರಿ, ಡಿಪ್ಲೋಮಾ ಹೀಗೆ ವಿವಿಧ ಪದವಿಯ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದ್ದು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here