Wednesday 14th, May 2025
canara news

ರಾಹುಲ್ ಗಾಂಧಿ ಮುಂದೆ ಕಣ್ಣೀರು ಹಾಕಿದ ಜನಾರ್ದನ ಪೂಜಾರಿ

Published On : 22 Mar 2018   |  Reported By : canaranews network


ಮಂಗಳೂರು: ಕರಾವಳಿ ಮತ್ತು ಮಲೆನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಸಂಜೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದಿಂದ ವಾಪಾಸಾಗುವಾಗ ರಾಹುಲ್ ಗಾಂಧಿಯ ಮುಂದೆಯೇ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

ಪ್ರವಾಸದ ಭಾಗವಾಗಿ ರಾಹುಲ್ ಗಾಂಧಿ ಸಂಜೆ ನೆಹರೂ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ನಂತರ ರೊಸಾರಿಯೋ ಚರ್ಚ್ ಗೆ ಭೇಟಿ ನೀಡಿದ ಅವರು ಬಳಿಕ ಕುದ್ರೋಳಿ ದೇವಸ್ಥಾನಕ್ಕೆ ತೆರಳಿದರು.ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಆಗಮಿಸಿದ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿ ಅವರಲ್ಲಿ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದರು.ನಂತರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯವರನ್ನು ಸನ್ಮಾನಿಸಲಾಯಿತು.ದೇವಾಲಯದಿಂದ ರಾಹುಲ್ ಗಾಂಧಿ ಹಿಂದಿರುಗುವಾಗ ರಾಹುಲ್ ಗಾಂಧಿ ಎದುರು ಜನಾರ್ದನ ಪೂಜಾರಿ ಕಣ್ಣೀರು ಹಾಕಿದರು. ರಾಹುಲ್ ಕೆನ್ನೆ ಸವರಿ ಕಣ್ಣೀರಿಟ್ಟು ಗದ್ಗರಿತರಾದ ಪೂಜಾರಿ ಅವರನ್ನು ರಾಹುಲ್ ಗಾಂಧಿ ಸಂತೈಸಿದರು. ಜನಾರ್ದನ ಪೂಜಾರಿಯನ್ನು ತಬ್ಬಿಕೊಂಡು ರಾಹುಲ್ ಗಾಂಧಿ ಸಮಾಧಾನ ಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here