Sunday 28th, April 2024
canara news

ಮಂಗಳೂರಲ್ಲಿ ಹನಿಟ್ರ್ಯಾಪ್ ಪ್ರಕರಣ 6 ಜನರ ಬಂಧನ

Published On : 24 Mar 2018   |  Reported By : canaranews network


ಮಂಗಳೂರು: ನಿವೃತ್ತ ಸರಕಾರಿ ಅಧಿಕಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಿ ಲಕ್ಷಾಂತರ ರೂಪಾಯಿ ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಸಾಜ್ ನೆಪದಲ್ಲಿ ನಿವೃತ್ತ ಅಧಿಕಾರಿಯನ್ನು ಹನಿಟ್ರ್ಯಾಪ್ ಮಾಡಿದ ಆರೋಪದ ಮೇಲೆ 3 ಮಂದಿ ಯುವತಿಯರು ಸೇರಿದಂತೆ ಒಟ್ಟು 6 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನ ನಿವೃತ್ತ ಸರಕಾರಿ ಅಧಿಕಾರಿಯೊಬ್ಬರು ಬೆನ್ನು ನೋವಿನಿಂದ ಬಳಲುತ್ತಿದ್ದು ನೋವು ನಿವಾರಣೆಗೆ ಮಸಾಜ್ ಮಾಡುವ ನೆಪದಲ್ಲಿ ಮಂಗಳೂರಿನ ಮೇರಿಹಿಲ್ ನ ಮನೆಯೊಂದಕ್ಕೆ ಬರಲು ಹೇಳಲಾಗಿತ್ತು.

ನಿವೃತ್ತ ಅಧಿಕಾರಿ ಮನೆಗೆ ಹೋದ ಕೂಡಲೇ 3 ಮಂದಿ ಅಪರಿಚಿತ ಯುವಕರು ಏಕಾಏಕಿ ಮನೆಗೆ ಪ್ರವೇಶಿಸಿ ಬೆದರಿಸಿದ್ದಾರೆ ಎಂದು ಹೇಳಲಾಗಿದೆ. ನಂತರ ಅವರನ್ನು ಬಲತ್ಕಾರವಾಗಿ ನಗ್ನಗೊಳಿಸಿ ಯುವತಿಯರ ಜೊತೆ ವೀಡಿಯೋ ಹಾಗೂ ಫೋಟೋ ಕ್ಲಿಕ್ಕಿಸಿದ್ದಾರೆ. ಈ ಕೂಡಲೇ 3 ಲಕ್ಷ ರೂಪಾಯಿ ಹಣ ನೀಡದಿದ್ದರೆ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ.ಯುವಕರ ಬೆದರಿಕೆ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿ 3 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ನಂತರ ಈ ಘಟನೆಯ ಕುರಿತು ಸಂತ್ರಸ್ತ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯ ಕುರಿತು ತನಿಖೆ ನಡೆಸಿದ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರು ಸೇರಿದಂತೆ ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಂಗಳೂರಿನ ಜಿಲ್ಲೆಯ ಮೂಡಗೆರೆ ನಿವಾಸಿ ರವಿ ಗೌಡ (42), ಮಂಗಳೂರಿನ ಬಿಜೈ ನಿವಾಸಿ ಪ್ರೀತೇಶ್ (36), ಮಂಗಳೂರಿನ ಪಡೀಲ್ ನಿವಾಸಿ ರಮೇಶ್ (35) ಎಂದು ಗುರುತಿಸಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾದ 3 ಯುವತಿರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳಿಂದ 1.5 ಲಕ್ಷ ರೂಪಾಯಿ ನಗದು ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here