Sunday 6th, July 2025
canara news

ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ, 3 ಆರೋಪಿಗಳ ಬಂಧನ

Published On : 28 Mar 2018   |  Reported By : canaranews network


ಮಂಗಳೂರು: ಮಂಗಳೂರು ಹೊರವಲಯದ ತಣ್ಣೀರು ಬಾವಿ ಬೀಚ್ ಬಳಿ ನಡೆದಿದೆ ಎನ್ನಲಾದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಠಾಣೆಯ ಪೊಲೀಸರು 3 ಮಂದಿ ಅರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈಕಂಪಾಡಿ ಮೀನಕಳಿಯ ನಿವಾಸಿ ಸುಕೇಶ್ ಪುತ್ರನ್, ತಣ್ಣೀರುಬಾವಿ ನಿವಾಸಿಗಳಾದ ವರುಣ್, ದೀಕ್ಷಿತ್ ಎಂದು ಗುರುತಿಸಲಾಗಿದೆ.ಮಾರ್ಚ್ 24ರ ಸಂಜೆ ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳ ತಂಡದ ಮೇಲೆ ಯುವಕರ ಗಂಪೊಂದು ನೈತಿಕ ಪೊಲೀಸ್ ಗಿರಿ ನಡೆಸಿದೆ ಎಂದು ಅರೋಪಿಸಲಾಗಿದೆ.ತಣ್ಣೀರುಬಾವಿಯ ಫಾತಿಮಾ ಚರ್ಚ್ ಬಳಿಯ ಬೀಚ್ ನಲ್ಲಿ ನಗರದ ಕುಲಾಸೊ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರ ಜೊತೆ ಸಾಬಿತ್, ಸಮೀರ್ ಮತ್ತು ನಿತೇಶ್ ಎಂಬ ಮೂವರು ಮಂದಿ ವಿದ್ಯಾರ್ಥಿಗಳು ಬರ್ತ್ ಡೇ ಸಂಭ್ರಮ ಆಚರಿಸಲು ತೆರಳಿದ್ದರು

. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ ಎಂದು ಹೇಳಲಾಗಿತ್ತು.ಇಬ್ಬರು ವಿದ್ಯಾರ್ಥಿನಿಯರ ಜೊತೆಗಿದ್ದ ಸಾಬಿತ್, ಸಮೀರ್ ಮತ್ತು ನಿತೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಹುಟ್ಟುಹಬ್ಬದ ಸಂಭ್ರಮಾಚಾರಣೆ ನಿರತರಾಗಿದ್ದ ವಿದ್ಯಾರ್ಥಿಗಳು ತಮ್ಮೊಂದಿಗಿದ್ದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿ ಈ ಹಲ್ಲೆ ನಡೆಸಲಾಗಿದೆ.ಬಳಿಕ ವಿದ್ಯಾರ್ಥಿನಿಯರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರೆಂಬುದನ್ನು ತಿಳಿದ ಬಳಿಕ ಯುವಕರ ತಂಡ ಸ್ಥಳದಿಂದ ಪರಾರಿಯಾಗಿತ್ತು. ಹಲ್ಲೆಗೊಳಗಾದ ಯುವಕರಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಘಟನೆಯ ಕುರಿತು ತನಿಖೆ ನಡೆಸಿದ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here