Tuesday 23rd, April 2024
canara news

ವೇಶ್ಯಾವಾಟಿಕೆ ಆರೋಪ: ಮಂಗಳೂರು ಸಿಸಿಬಿ ಪೊಲೀಸರಿಂದ 11 ಜನರ ಬಂಧನ

Published On : 04 Apr 2018   |  Reported By : canaranews network


ಮಂಗಳೂರು: ಅಕ್ರಮ ಚಟುವಟಿಕೆ ನಡೆಯುತಿದ್ದ ಮಸಾಜ್ ಪಾರ್ಲರ್ ಒಂದರ ಮೇಲೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ರಾವ್ ರಸ್ತೆಯಲ್ಲಿರುವ ಟೋಪಾಝ್ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿರುವ ಸಂಜೀವಿನಿ ಆರ್ಯುವೇದಿಕ್ ಥೆರಪಿ ಕ್ಲಿನಿಕ್ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಲಾಗಿದೆ.

ಮಸಾಜ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ನಡೆಸುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರ ತಂಡ ಹಾಗೂ ಬಂದರು ಪೊಲೀಸರು ದಾಳಿ ನಡೆಸಿದ್ದಾರೆ.ಈ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು ಎಂದು ಅರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರನ್ನು 1)ಹರೀಶ್ ಶೆಟ್ಟಿ 2)ಸಿ ಕೆ ಪಟ್ಟಕಂಡಿ ಪ್ರಸೂರನ್, 3)ರವೂದ್ ಎಮ್ ಕೆ, 4)ಸಾದಕತುಲ್ಲಾ 5)ಅಬ್ದುಲ್ ರೆಹಮಾನ್, 6)ಸಚೀಂದ್ರ ಎಮ್, 7)ದಿತಿನ್ ದಾಸ್, 8)ಶಿಬೂಕೆ, 9) ಅನಸ್, 10)ರಾಜೇಶ್, 11)ಸಿಯಾದ್ ಟಿ ವಿ ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳಿಂದ 53,400 ರೂಪಾಯಿ ನಗದು ಹಣ ಹಾಗೂ 13 ಮೊಬೈಲ್ ಪೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here