Wednesday 14th, May 2025
canara news

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ – ದ.ಕ ಜಿಲ್ಲೆಯಲ್ಲಿ ಕುಸಿತ ಕಂಡ ಮದ್ಯ ಮಾರಾಟ

Published On : 15 Apr 2018   |  Reported By : canaranews network


ಮಂಗಳೂರು: ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಕುಸಿತಗೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹೆಚ್ಚಾಗಿ ಮದ್ಯ ಮಾರಾಟವಾಗುತ್ತಿತ್ತು. ಆದರೆ ಇದೀಗ ಮದ್ಯ ವ್ಯವಹಾರ ಅರ್ಧದಷ್ಟು ಕುಸಿತಗೊಂಡಿರುವುದು ಕಂಡು ಬಂದಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹೆಚ್ಚು ಕಾರ್ಯಕ್ರಮಗಳು, ಮದುವೆಗಳು ನಡೆಯುತ್ತಿರುತ್ತವೆ. ಈ ಹಿನ್ನೆಲೆ ಎರಡು ತಿಂಗಳಲ್ಲಿ ಅತೀ ಹೆಚ್ಚು ಮದ್ಯ ಮಾರಾಟ ನಡೆಯುತ್ತದೆ.

ಆದರೆ ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಕುಸಿತಗೊಂಡಿದೆ.ಈ ಬಾರಿ ಜಿಲ್ಲೆಯಲ್ಲಿ ಸುಮಾರು 8,544 ಕೇಸ್ ಬಾಕ್ಸ್ ಗಳು ಕಡಿಮೆ ಮಾರಾಟವಾಗಿವೆ. ಗ್ರಾಮೀಣ ಭಾಗದಲ್ಲಿ ಶೇ. 90 ರಷ್ಟು ಮದ್ಯ ಮಾರಾಟ ನಿಯಂತ್ರಣದಲ್ಲಿದೆ. ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದಿರುವುದರಿಂದ, ಅಕ್ರಮ ಮದ್ಯ ಮಾರಾಟ ಹಾಗೂ ಮತದಾರರಿಗೆ ಮದ್ಯವನ್ನು ಆಮಿಷವಾಗಿ ಬಳಸದಂತೆ ಮದ್ಯದಂಗಡಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿರಿಸಿದೆ. ಇದು ಮದ್ಯ ಮಾರಾಟಗಾರರ ವ್ಯವಹಾರದ ಮೇಲೆ ಪರಿಣಾಮ ಬೀರಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here