Wednesday 14th, May 2025
canara news

ಏಪ್ರಿಲ್ 21: ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ

Published On : 19 Apr 2018   |  Reported By : Bernard Dcosta


ಕುಂದಾಪುರ: ಎ ೧೮: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಕೇಶ್ ಮಲ್ಲಿಯವರು ಏಪ್ರಿಲ್ 21 ಶನಿವಾರ ಬೆಳಿಗ್ಗೆ ಗಂಟೆ 10ಕ್ಕೆ ಶಾಸ್ತ್ರೀ ಸರ್ಕಲ್‍ನಲ್ಲಿ ಕಾರ್ಯಕರ್ತರ ಬಹಿರಂಗ ಸಭೆಯ ಬಳಿಕ ಕುಂದಾಪುರ ಮಿನಿವಿಧಾನ ಸೌಧದ ಚುನಾವಣಾ ಕಛೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಲೋಕ ಸಭಾ ಸದಸ್ಯ ಡಾ. ವೀರಪ್ಪ ಮೊಯಿಲಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಚಂದ್ರ ಶೆಟ್ಟಿ, ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಕೆ. ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ್ ತೋನ್ಸೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಲ್ಯಾಡಿ ಶಿವರಾಮ ಶೆಟ್ಟಿ, ಶಂಕರ ಕುಂದರ್, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗ ಉಪಾಧ್ಯಕ್ಷರಾದ ಮಾಣಿ ಗೋಪಾಲ್, ಕೆ.ಎಫ್.ಡಿ.ಸಿ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ ಮುಂತಾದ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕಾಂಗ್ರೆಸ್ ಅಭ್ಯರ್ಥಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here