Thursday 25th, April 2024
canara news

ಬಾಲಕಿಗೆ ಲೈಂಗಿಕ ಕಿರುಕುಳ ವ್ಯಕ್ತಿಯ ಬಂಧನ

Published On : 26 Apr 2018   |  Reported By : canaranews network


ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾದ ವ್ಯಕ್ತಿ ಪೊಲೀಸ್ ಸ್ಟೇಷನ್ ನ ಲಾಕಪ್ ನಲ್ಲಿ ತನಗೆ ತಾನೆ ಶಿಕ್ಷೆ ವಿಧಿಸಿಕೊಂಡ ಘಟನೆ ನಡೆದಿದೆ.ಪುತ್ತೂರು ತಾಲೂಕಿನ ಕಸಬ ಗ್ರಾಮದ ಮುರ ನಿವಾಸಿ ಶಂಷೇರ್ ಖಾನ್ (50) ಎಂಬಾತನನ್ನು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದ ಮೇಲೆ ಬಂಧಿಸಲಾಗಿದೆ. ಈತ ಕಳೆದ ಒಂದು ವರ್ಷದಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಬಾಲಕಿಗೆ ತನ್ನ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ಈತ ತೋರಿಸುತ್ತಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.ಆದರೆ ಬಂಧನಕ್ಕೊಳಗಾದ ಶಂಷೇರ್ ಖಾನ್ ಕಳೆದ ರಾತ್ರಿ ಸ್ಟೇಷನ್ ನ ಲಾಕಪ್ ಸರಳಿಗೆ ತಲೆ ಗುದ್ದಿಕೊಂಡು ಗಾಯ ಮಾಡಿಕೊಂಡಿದ್ದಾನೆ. ತಲೆಗೆ ಗಾಯವಾಗಿರುವ ಆರೋಪಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here