Wednesday 14th, May 2025
canara news

ಕಾಂಗ್ರೆಸಿನ ತುಂಡು ರಾಜಕಾರಣಿಗಳಿಂದ ಟಿಕೆಟ್ ಕೈತಪ್ಪಿದೆ: ವಿಜಯ ಕುಮಾರ್ ಶೆಟ್ಟಿ ಆಕ್ರೋಶ

Published On : 26 Apr 2018


ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ್ದಾರೆ. ರಾಹುಲ್ ಗಾಂಧಿ ಮಂಗಳೂರಿಗೆ ಬಂದು ತಮಗೆ ನೀಡಬೇಕಾದ ಸ್ಥಾನಮಾನ ಕುರಿತು ಭರವಸೆ ನೀಡುವವರೆಗೂ ಚುನಾವಣಾ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ರ ಚುನಾವಣೆ ಸಂದರ್ಭದಲ್ಲಿ ಪಕ್ಷದ ಕೆಲ ತುಂಡು ರಾಜಕಾರಣಿಗಳಿಂದಾಗಿ ನನಗೆ ಟಿಕೆಟ್ ಕೈ ತಪ್ಪಿತ್ತು. ಆದರೆ ಈ ಬಾರಿಯಾದರೂ ಪಕ್ಷ ಟಿಕೆಟ್ ನೀಡಬಹುದೆಂಬ ಆಶಾಭಾವದಲ್ಲಿದ್ದೆ. ಆದರೆ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಈ ಬಾರಿ ಮತ್ತೇ ಅದೇ ತುಂಡು ರಾಜಕಾರಣಿಗಳಿಂದಲೇ ಟಿಕೆಟ್ ಕೈ ತಪ್ಪಿದೆ," ಎಂದು ಅಸಮಾಧಾನ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here