Saturday 20th, April 2024
canara news

ಕೋಮು-ಗಲಭೆಯನ್ನು ಮೆಟ್ಟಿ ನಿಂತ ಕರಾವಳಿಯ ಜನತೆಗೆ ನನ್ನ ಕೋಟಿ ನಮನ – ಸಿಎಂ

Published On : 28 Apr 2018   |  Reported By : canaranews network


ಮಂಗಳೂರು: ಕೋಮು ಗಲಭೆಯನ್ನು ಮೆಟ್ಟಿ ನಿಂತ ಕರಾವಳಿಯ ಜನತೆಗೆ ಸಿಎಂ ಸಿದ್ದರಾಮಯ್ಯ ಕೋಟಿ ನಮನಗಳನ್ನು ತಿಳಿಸಿದ್ದಾರೆ.ಮಂಗಳೂರಿನ ಟಿಎಂಎಪೈ ಹಾಲ್ ನಲ್ಲಿ ನಡೆದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಂದರ್ಭ ಮಾತನಾಡಿದ ಅವರು, ದ.ಕ ಮತ್ತು ಉಡುಪಿಯನ್ನು ಬಿಜೆಪಿ ಪ್ರಯೋಗ ಶಾಲೆ ಮಾಡಿಕೊಂಡಿದೆ. ನಮ್ಮ ಸರ್ಕಾರವಿರುವಾಗ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಅನ್ನುವ ಆರೋಪ ನಮ್ಮ ಮೇಲಿದೆ.

ಒಟ್ಟು 11 ಮಂದಿ ಕಾರ್ಯಕರ್ತರ ಹತ್ಯೆಯಾಗಿದೆ. ಆದರೆ ಬಿಜೆಪಿ 23 ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಹೇಳ್ತಾರೆ. ಈ ಮೂಲಕ ಕೋಮು ಗಲಭೆಗೆ ಜಿಲ್ಲೆಯಲ್ಲಿ, ರಾಜ್ಯದಲ್ಲಿ ಬಿಜೆಪಿ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ. ಆದರೆ ಕರಾವಳಿಯ ಜನ ಇವೆಲ್ಲವನ್ನು ಮೆಟ್ಟಿ ನಿಂತವರು. ಇದಕ್ಕಾಗಿ ಕರಾವಳಿಗರಿಗೆ ನನ್ನ ಕೋಟಿ ನಮನಗಳು ಎಂದು ಹೇಳಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಮುಂದಿನ 5 ವರುಷಗಳಲ್ಲಿ ನಮ್ಮ ಪಕ್ಷದ ಬದ್ಧತೆ ಏನು ಅನ್ನೊದನ್ನು ತಿಳಿಸುತ್ತೇವೆ. ಜನತೆಗೆ ಕೊಟ್ಟ ಭರವಸೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಈ ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here