Wednesday 14th, May 2025
canara news

ಸಂಸದ ನಳಿನ್ ಮೇಲಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Published On : 28 Apr 2018   |  Reported By : canaranews network


ಮಂಗಳೂರು: 2014ರಲ್ಲಿ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಸದ ನಳಿನ್ ಕುಮಾರ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.2014ರ ಡಿಸೆಂಬರ್ 9 ರಂದು ಮಂಗಳೂರು ಹೊರವಲಯದ ಉಳಾಯಿಬೆಟ್ಟುವಿನಲ್ಲಿ ದತ್ತ ಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.

ಈ ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು. ಆದರೆ, ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಸದ ನಳಿನ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಂಗಳೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಯುತ್ತಿತ್ತು.ಇದೀಗ "ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಹಾಗೂ ಇವುಗಳನ್ನು ಪುಷ್ಟೀಕರಿಸುವ ಸಾಕ್ಷ್ಯಗಳಿಲ್ಲ" ಎಂಬ ಕಾರಣಕ್ಕೆ ಪ್ರಕರಣ ರದ್ದುಗೊಳಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here