Saturday 20th, April 2024
canara news

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Published On : 03 May 2018   |  Reported By : canaranews network


ಮಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಮಾತ್ರವಲ್ಲ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, 4 ಗಂಟೆಗೆ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನರೇಂದ್ರ ಮೋದಿಯವರು ವ್ಯಾಪಕ ಪ್ರಚಾರ ನಡೆಸಿದ್ದರೂ, ಅಲ್ಲಿನ ಎಂಟು ಕ್ಷೇತ್ರಗಳಲ್ಲಿ ಏಳನ್ನು ಕಾಂಗ್ರೆಸ್ ಗೆದ್ದಿತ್ತು.

ಆದರೆ ಈ ಬಾರಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಚುನಾವಣೆಯ ಬಿಸಿ ಹೆಚ್ಚುತ್ತಿದ್ದಂತೆ ಕಾರ್ಯಕರ್ತರಲ್ಲಿ ಈ ಬಾರಿಯ ಚುನಾವಣೆ ಹೊಸ ಹುರುಪು ಮೂಡಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here