Thursday 25th, April 2024
canara news

ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮುಂಜೇಶ್ವರ, ನೂತನ ಮುಖ್ಯೋಪಾದ್ಯಾಯರಾಗಿ ರವಿದಾಸ ಶೆಟ್ಟಿ ಅಧಿಕಾರ ಸ್ವೀಕಾರ.

Published On : 05 May 2018   |  Reported By : Rons Bantwal


ಮುಂಬಯಿ, ಮೇ.05: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಮುಖೋಪಾದ್ಯಾಯರಾಗಿ ಆಯ್ಕೆಗೊಂಡ ರವಿದಾಸ ಶೆಟ್ಟಿ ಅವರಿಗೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ| ಎನ್.ಕೆ.ಬಿಲ್ಲವ ಅವರು ಅಧಿಕಾರ ಹಸ್ತಾಂತರಿಸಿದರು.

ಶಾಲೆಯನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವ ಗುರುತರ ಜವಾಬ್ದರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಶ್ರೀ ರವಿದಾಸ ಶೆಟ್ಟಿ ಸಮರ್ಥರಾಗಿದ್ದಾರೆ ಎಂದು ತಿಳಿಸಿದರು. ಸಂಸ್ಥೆಯ ನಿರ್ದೇಶಕರಾದ ಶ್ರೀ ಕೆ.ಪುಂಡಲೀಕ ನಾಯಕ್ ಶಾಲಾ ಅಭಿವೃದ್ಧಿಗೆ ಅಗತ್ಯವಿರುವ ವಿಷಯಗಳ ಬಗ್ಗೆ ತಿಳಿಸಿ,ಈ ನಿಟ್ಟಿನಲ್ಲಿ ಮುಖ್ಯೋಪಾದ್ಯಾಯರೊಂದಿಗೆ ಎಲ್ಲರೂ ಕೈ ಜೋಡಿಸಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಉದಯ ಪೂಜಾರಿಯವರು ನೂತನ ಮುಖ್ಯೋಪಾದ್ಯಾಯರಿಗೆ ಶುಭಹಾರೈಸಿ ಮುಂದಿನ ದಿನಗಳಲ್ಲಿ ಈ ಶಿಕ್ಷಣ ಸಂಸ್ಥೆ ಬಹು ಎತ್ತರಕ್ಕೆ ಬೆಳೆದು ಗುಣಾತ್ಮಕ ಶಿಕ್ಷಣವನ್ನು ನೀಡುವಂತಾಗಲಿ ಎಂದು ಹಾರೈಸಿದರು. ರವಿದಾಸ ಶೆಟ್ಟಿಯವರು ತನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುತ್ತೇನೆ ಎನ್ನುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ರಾಜೀವ ಶೆಟ್ಟಿ, ಸತೀಶ ಪೂಜಾರಿ ಹಾಗೂ ಸಂಚಾಲಕರಾದ ಶಂಕರ ಪೂಜಾರಿ ಉಪಸ್ಥಿತರಿದ್ದರು. ಸಂಯೋಜಕಿ ಶ್ರೀಮತಿ ಗೀತಾದೇವಿ ಅಡಿಗ ಅವರು ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here