Wednesday 14th, May 2025
canara news

ಮೇ. ೮ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಬಿಜೆಪಿ ಚಾಣಕ್ಯ ಅಮಿತ್ ಶಾ

Published On : 07 May 2018   |  Reported By : canaranews network


ಮಂಗಳೂರು: ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಮತ್ತೊಮ್ಮೆ ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದು, ಜಿಲ್ಲೆಯಲ್ಲಿ ಮತಬೇಟೆಗೆ ಮುಂದಾಗಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನೆಲೆ ಮೇ 08ರಂದು ಮಂಗಳೂರಿಗೆ ಆಗಮಿಸಿ ಬಿಜೆಪಿ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.ಮಂಗಳೂರು, ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ ಕ್ಷೇತ್ರಗಳಲ್ಲಿ ಮೇ 8 ರಂದು ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ.

ಮೇ 8 ರಂದು ಮಡಿಕೇರಿಯಿಂದ ವಿಮಾನ ಮೂಲಕ ಆಗಮಿಸುವ ಅಮಿತ್ ಶಾ, ಮದ್ಯಾಹ್ನ 2.30 ಕ್ಕೆ ಮಂಗಳೂರು ಕ್ಷೇತ್ರದ ಕಾಪಿಕಾಡ್ ಬಿಜೆಪಿ ಕಚೇರಿಯಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ, ಸಂಜೆ 3.45ರಿಂದ 5.45 ರವರೆಗೆ ನಗರದ ನವಭಾರತ ವೃತ್ತದಿಂದ ಪಿ.ಎಂ ರಾವ್ ರೋಡ್ ಮೂಲಕ ಟೆಂಪಲ್ ಸ್ಕ್ವಾರ್ ವರೆಗೆ, ನಂತರ ಸಂಜೆ 4.45ಕ್ಕೆ ಕಾವೂರಿನಿಂದ ಮರಕಡವರೆಗೆ ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here