Thursday 25th, April 2024
canara news

ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣು

Published On : 10 May 2018   |  Reported By : canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 12 ರಂದು ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಭಧ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ .

ಜಿಲ್ಲೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಎಂದು ಡಾ. ರವಿಕಾಂತೇ ಗೌಡ ಕರೆನೀಡಿದ್ದು, ಚುನಾವಣೆಗೆ ಇನ್ನು ಎರಡೇ ದಿನಗಳು ಬಾಕಿಯಿರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಜಿಲ್ಲೆಯ ಅತ್ಯಂತ ಸೂಕ್ಷ್ಮ ಮತಗಟ್ಟೆಗಳ ಮೇಲೆ ಕಣ್ಣಿರಿಸಿದ್ದು ಭದ್ರತೆಗೆ ಎಲ್ಲಾ ಕ್ರಮಗಳನ್ನು ಕೈ ಗೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಶಾಂತಿ ಮತ್ತು ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ. ಜಿಲ್ಲೆಯ ಗಡಿ ಭಾಗಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಲ್ಲಿ ಸಿಸಿಟಿವಿಗಳ ಕಣ್ಗಾವಲು, ಕೇಂದ್ರೀಯ ಭದ್ರತಾ ಪಡೆಗಳ ಯೋಧರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here