Friday 26th, April 2024
canara news

ಚುನಾವಣೆ ವಿಜಯೋತ್ಸವಕ್ಕೆ ಪಟಾಕಿ ನಿಷೇಧ

Published On : 13 May 2018   |  Reported By : canaranews network

ಮಂಗಳೂರು: ಈ ಬಾರಿ ಚುನಾಯಿತ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು ವಿಜಯೋತ್ಸವಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸುವಂತಿಲ್ಲ.ಹೀಗಂತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಸಸಿಕಾಂತ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ವಿಜಯೋತ್ಸವಕ್ಕೆ ನಿಷೇಧ ಇದ್ದರೂ ಇದುವರೆಗೆ ಪಟಾಕಿ ಸಿಡಿಸುವುದಕ್ಕೆ ನಿಷೇಧ ಇದುವರೆಗೆ ಇರಲಿಲ್ಲ. ಆದರೆ ಈ ಬಾರಿ ಚುನಾವಣಾ ಆಯೋಗ ಇದಕ್ಕೂ ನಿರ್ಬಂಧ ವಿಧಿಸಿದೆ.ಪಟಾಕಿ ಸಿಡಿಸುವುದಕ್ಕೆ ಮಾತ್ರವಲ್ಲದೆ, ಪಟಾಕಿ ಮಾರಾಟ ಮಾಡುವುದಕ್ಕೂ ನಿಷೇಧ ವಿಧಿಸಲಾಗಿದೆ. ಮತ ಎಣಿಕೆ ನಡೆಯುವ ಮೇ 15ರಂದು ಬೆಳಿಗ್ಗೆ 10 ಗಂಟೆಯಿಂದ ಮೇ 17ರ ಸಂಜೆ 5 ಗಂಟೆಯವರೆಗೆ ಯಾರೂ ಕೂಡಾ ಪಟಾಕಿ ಸಿಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ವಿಜಯೋತ್ಸವದ ದಿನ ಮೆರವಣಿಗೆ, ಪಟಾಕಿಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here