Friday 17th, August 2018
canara news

ಬಂಟ್ವಾಳದಲ್ಲೂ ಕಮಲದ ಅಲೆ - ಗೆಲುವಿನ ನಗೆ ಬೀರಿದ ಬಿಜೆಪಿ ಅಭ್ಯರ್ಥಿ

Published On : 16 May 2018


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಮಾನಾಥ ರೈ ವಿರುದ್ಧ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಂಟ್ವಾಳ ಕ್ಷೇತ್ರದಿಂದ ಸತತ ಏಳು ಬಾರಿ ಸ್ಪರ್ಧಿಸಿ, ಆರು ಸಲ ಗೆಲುವು ಕಂಡಿರುವ ಕಾಂಗ್ರೆಸ್ಸಿನ ಹಿರಿಯ ನಾಯಕ, ಹಾಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಎಂಟನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇದೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಸಚಿವ ರಮಾನಾಥ ರೈ ಎರಡನೇ ಬಾರಿಗೆ ಸೋಲಾಗಿದೆ. ಈ ಬಾರಿ ಸಚಿವ ರಮಾನಾಥ ರೈ ವಿರುದ್ಧ ಕಣಕ್ಕೆ ಇಳಿದಿದ್ದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು 15971 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರಿಗೆ ಒಟ್ಟು 69177 ಮತಗಳು ದೊರಕಿದರೆ, ಕಾಂಗ್ರೆಸ್ ಅಭ್ಯರ್ಥಿ ಸಚಿವ ರಮಾನಾಥ ರೈ 53283 ಮತಗಳನ್ನು ಪಡೆದು ಸೋಲುಂಡಿದ್ದಾರೆ.

ಇನ್ನು, ಮತ ಎಣಿಕೆ ಕೇಂದ್ರದಿಂದ ನಿರ್ಗಮಿಸುತ್ತಿದ್ದ ಬಂಟ್ವಾಳ ಕ್ಷೇತ್ರದಲ್ಲಿ ಸೋಲುಂಡ ಅಭ್ಯರ್ಥಿ ಕಾಂಗ್ರೆಸ್ ರಮಾನಾಥ ರೈ ಅವರ ವಾಹನಕ್ಕೆ ಕೆಲ ಬಿಜೆಪಿ ಕಾರ್ಯಕರ್ತರು ಬಾಟಲಿ ಎಸೆದ ಘಟನೆ ಮಂಗಳೂರಿನ ಬೊಂದೇಲ್ ನಲ್ಲಿ ನಡೆದಿದೆ. ರಮಾನಾಥ ರೈ ಅವರು ನಿರ್ಗಮಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಅವರ ವಾಹನಕ್ಕೆ ಕೆಲ ಕಿಡಿಗೇಡಿಗಳು ಬಾಟಲಿಗಳನ್ನು ತೂರಿದ್ದಾರೆ, ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ರೈ ಅವರು ಸುರಕ್ಷಿತವಾಗಿ ಸಾಗುವುದಕ್ಕೆ ಅವಕಾಶ ಮಾಡಿಕೊಟ್ಟರು
More News

ಆ.19: ಮಲಾಡ್ ಕನ್ನಡ ಸಂಘದ17ನೇ ಮಹಾಸಭೆ
ಆ.19: ಮಲಾಡ್ ಕನ್ನಡ ಸಂಘದ17ನೇ ಮಹಾಸಭೆ
ರಾಷ್ಟ್ರದ 72ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಕನ್ನಡ ಸಂಘ ಸಾಂತಕ್ರೂಜ್ ಸಂಸ್ಥೆ
ರಾಷ್ಟ್ರದ 72ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಕನ್ನಡ ಸಂಘ ಸಾಂತಕ್ರೂಜ್ ಸಂಸ್ಥೆ
ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ 72ನೇ ಸ್ವಾತಂತ್ರ್ಯ ದಿನಾಚರಣೆ
ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ 72ನೇ ಸ್ವಾತಂತ್ರ್ಯ ದಿನಾಚರಣೆ

Comment Here