Wednesday 14th, May 2025
canara news

ಮಂಗಳೂರು ಉತ್ತರದಲ್ಲಿ ಡಾ. ಭರತ್ ಶೆಟ್ಟಿ ಅಮೋಘ ಗೆಲುವು

Published On : 16 May 2018   |  Reported By : canaranews network


ಮಂಗಳೂರು: ಕುತೂಹಲ ಕೆರಳಿಸಿದ್ದ ವಿಧಾನ ಸಭಾ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಡಾ. ಭರತ್ ಶೆಟ್ಟಿ ಅಮೋಘ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಥವಾ ಸುರತ್ಕಲ್ ಕೂಡಾ ಒಂದು. ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲಾಗುವ ಈ ಕ್ಷೇತ್ರ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಇಲ್ಲಿ ವಿಜಯದ ನಗೆ ಬೀರಿದೆ.ಶಾಸಕ ಮೊಯ್ದೀನ್ ಬಾವಾ ವಿರುದ್ಧ ಡಾ.

ಭರತ್ ಶೆಟ್ಟಿ ಈ ಬಾರಿ ಸ್ಪರ್ಧಿಸಿದ್ದು 18,535 ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಾ. ಭರತ್ ಶೆಟ್ಟಿ ಅವರಿಗೆ ಒಟ್ಟು 98648 ಮತಗಳು ಬಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ 72,000 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ.ಶಾಸಕ ಮೊಯ್ದೀನ್ ಬಾವಾ ವಿರುದ್ಧ ಡಾ. ಭರತ್ ಶೆಟ್ಟಿ ಈ ಬಾರಿ ಸ್ಪರ್ಧಿಸಿದ್ದು 18,535 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಮೊಯ್ದೀನ್ ಬಾವಾ ಅವರ ಎದುರು 5373 ಮತಗಳ ಅಂತರದಿಂದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಪರಾಭವಗೊಂಡಿದ್ದರು. ಆದರೆ ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here