Friday 26th, April 2024
canara news

ಇವಿಎಂನಲ್ಲಿ ಸಂಶಯ – 'ರೈ' ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ 7 ಅಭ್ಯರ್ಥಿಗಳಿಂದ ದೂರು

Published On : 16 May 2018   |  Reported By : canaranews network


ಮಂಗಳೂರು: ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದ್ದಾರೆ.

ಮಂಗಳೂರಿನ ಬೋಂದೆಲ್ನಲ್ಲಿರುವ ಮತ ಎಣಿಕೆಯ ಕೇಂದ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’. ಕಾಂಗ್ರೆಸ್ ಪಕ್ಷವು 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ಫಲಿತಾಂಶ ಸಂಪೂರ್ಣ ಬದಲಾಗಿದೆ ಎಂದು ಆಕ್ಷೇಪ ದಾಖಲಿಸಿದರು.ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷವು 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಇತರ 7 ಅಭ್ಯರ್ಥಿಗಳು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ರಿಟರ್ನಿಂಗ್ ಆಫೀಸರ್ ಮುಂದೆ ಆಕ್ಷೇಪ ದಾಖಲಿಸಿದ್ದಾರೆ.ಮಾತ್ರವಲ್ಲ ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here