Sunday 17th, February 2019
canara news

ಮೂಡುಬಿದಿರೆಯಲ್ಲಿ ಬಿಜೆಪಿಗೆ ಗೆಲುವು- ಬಿಜೆಪಿ ಉಮನಾಥ್ ಕೋಟ್ಯಾನ್ ಗೆ ಜಯ

Published On : 16 May 2018   |  Reported By : canaranews network


ಮಂಗಳೂರು:ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಮೂಡಬಿದ್ರೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಉಮಾನಾಥ ಕೋಟ್ಯಾನ್ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಉಮಾನಾಥ್ ಕೋಟ್ಯಾನ್ - 48461 ಪಡೆದಿದ್ದು ಈ ಬಾರಿ ಚುನಾವಣೆಯಲ್ಲಿ 22 ಸಾವಿರಕ್ಕೂ ಅಧಿಕ ಮತಗಳಿಂದ ಮೂಡುಬಿದಿರೆಯ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅಭಯಚಂದ್ರ ಜೈನ್ ವಿರುದ್ಧ ಜಯಗಳಿಸಿದ್ದಾರೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಮೂಡಬಿದಿರೆ ಕ್ಷೇತ್ರದ ಸಮಿತಿ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ ಉಮಾನಾಥ ಕೋಟ್ಯಾನ್ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರವಾಗಿ ಹಲವು ಕಾರ್ಯಕ್ರಮಗಳನ್ನು ಕರಾವಳಿಯಲ್ಲಿ ಆಯೋಜಿಸಿದವರು ಉಮನಾಥ ಕೋಟ್ಯಾನ್. ತುಳು ಭಾಷೆಯನ್ನು ಸಂವಿಧಾನದ ಹದಿನೆಂಟನೇ ಪರಿಚ್ಛೇದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದೆಹಲಿ ತನಕ ಮನವಿ ಕೊಂಡು ಹೋಗಿದ್ದರು.
More News

ಸೇವ್ ಸುವರ್ಣ ತ್ರಿಭುಜ ನಾಪತ್ತೆಯಾದ ಮೀನುಗಾರರ ಪತ್ತೆಗೆ ಉಳ್ಳಾಲ ಪತ್ರಕರ್ತರ ಜಾಗೃತಿ
ಸೇವ್ ಸುವರ್ಣ ತ್ರಿಭುಜ ನಾಪತ್ತೆಯಾದ ಮೀನುಗಾರರ ಪತ್ತೆಗೆ ಉಳ್ಳಾಲ ಪತ್ರಕರ್ತರ ಜಾಗೃತಿ
ಮಾ.04: ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ
ಮಾ.04: ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ
ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮ ಕಲಶೋತ್ಸವ
ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮ ಕಲಶೋತ್ಸವ

Comment Here