Tuesday 30th, April 2024
canara news

ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿಭಂಗಕ್ಕೆ ಯತ್ನ, ಇಬ್ಬರ ಬಂಧನ

Published On : 22 May 2018   |  Reported By : canaranews network


ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಬಹುಮತ ದೊರೆಯದೇ ಉರುಳಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರಕಾರ ರಚನೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದ್ದವು. ಈ ನಡುವೆ ಸಮಾಜದಲ್ಲಿ ಶಾಂತಿ ಕದಡುವಂಥ ಕೆಲವು ಸುಳ್ಳು ಸುದ್ದಿಗಳೂ ಹರಿದಾಡಲು ಆರಂಭಿಸಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚರ ವಹಿಸಿದ್ದ ಹಿನ್ನೆಲೆಯಲ್ಲಿ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಶಾಂತಿ ಕದಡಲು ಯತ್ನಿಸಿದ ಇಬ್ಬರನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನುಬಂಟ್ವಾಳ ತಾಲೂಕಿನ ಕೆರಾಳೆ ನಿವಾಸಿ ನಿತಿನ್ (29), ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ದಿನೇಶ್ (31) ಎಂದು ಗುರುತಿಸಲಾಗಿದೆ.ಬಿಜೆಪಿ ಸರಕಾರ ಬಿದ್ದು ಹೋದ ವೇಳೆ ಸಂಭ್ರಮಾಚರಣೆ ನೆಪದಲ್ಲಿ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಈ ಆರೋಪಿಗಳಿಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಪರಿಸ್ಥಿತಿ ಬಿಗಡಾಯಿಸಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here