Friday 3rd, May 2024
canara news

ನಿಪಾಹ್ ವೈರಸ್ ಭೀತಿ ಹಿನ್ನೆಲೆ, ಕರಾವಳಿಯಲ್ಲಿ ಭಾರೀ ಕಟ್ಟೆಚ್ಚರ

Published On : 23 May 2018   |  Reported By : canaranews network


ಮಂಗಳೂರು: ಕೇರಳದಲ್ಲಿ 10ಕ್ಕೂ ಹೆಚ್ಚು ಜನರನ್ನು ಬಲಿ ಪಡೆದುಕೊಂಡಿರುವ ನಿಪಾಹ್ ವೈರಸ್ ಆತಂಕ ಕರಾವಳಿ ಜಿಲ್ಲೆಗಳನ್ನೂ ಆವರಿಸಿದೆ. ಪಕ್ಕದ ಕೇರಳದಿಂದ ನಿಪಾಹ್ ವೈರಸ್ ಸೋಂಕು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ.ಈ ನಡುವೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೇರಳ ಮೂಲದ ಇಬ್ಬರು ರೋಗಿಗಳಿಗೆ ನಿಪಾಹ್ ವೈರಸ್ ಸೋಂಕು ತಗಲಿರುವ ಶಂಕೆಯ ಮೇರೆಗೆ ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ನಿಪಾಹ್ ಸೋಂಕು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಎಲ್ಲಾ ವೈದ್ಯರು, ಆಶಾ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕರ ಪತ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ಕೇರಳದಿಂದ ಬಂದವರಲ್ಲಿ ಅಥವಾ ಇತರರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.ಕೇರಳ ಗಡಿ ಭಾಗ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು ನಿಪಾಹ್ ವೈರಸ್ ಶಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ವೆನ್ಲಾಕ್ ಆಸ್ಪತ್ರೆಯ ತಳ ಅಂತಸ್ತಿನಲ್ಲಿ ಸದ್ಯ 5 ಬೆಡ್ ಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here