Monday 29th, April 2024
canara news

ಕುಂಭದ್ರೋಣ ಮಳೆಗೆ ಕರಾವಳಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ - ಮುಳುಗಡೆಯಾದ ವಾಹನಗಳು

Published On : 29 May 2018   |  Reported By : canaranews network


ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಅಲ್ಲೊಲ ಕಲ್ಲೊಲವನ್ನೆ ಸೃಷ್ಠಿಸಿದೆ.ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಗೆ ಮೂರು ದಿನಗಳ ಹಿಂದೆಯೇ ಮುಂಗಾರು ಪ್ರವೇಶಿಸಿದ್ದು ಪರಿಣಾಮ ಭಾರೀ ಗಾಳಿ ಮಳೆಯಾಗುತ್ತಿದೆ. ಇನ್ನು ನಗರದ ಬಹುತೇಕ ಭಾಗದಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪಡೀಲ್ ಅಂಡರ್ ಬ್ರಿಡ್ಜ್, ಕೂಳೂರು, ಕುತ್ತಾರು ಮುಖ್ಯರಸ್ತೆ, ಹಂಪನಕಟ್ಟೆ ಸೆಂಟ್ರಲ್ ರೈಲ್ವೆ ನಿಲ್ದಾಣ , ಯೆಯ್ಯಾಡಿ, ಶರ್ಬತ್ ಕಟ್ಟೆ, ಬಿಜೈ , ತೊಕ್ಕೊಟ್ಟು ಮುಂತಾದೆಡೆ ಕೃತಕ ಪ್ರವಾಹ ಸೃಷ್ಟಿಯಾಗಿದೆ. ಬಿಜೈ ಮತ್ತು ಹಂಪನಕಟ್ಟೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಕೃತಕ ನೆರೆಯಲ್ಲಿ ಮುಳುಗಡೆಯಾಗಿದ್ದು, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ.ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here