Thursday 23rd, May 2019
canara news

ರಾದ ಎಂ.ಎಸ್.ಮಹಮ್ಮದ್,ಪದ್ಮಶೇಖರ ಜೈನ್,ಸಾ

Published On : 10 Jun 2018   |  Reported By : canaranews network


ಬಂಟ್ವಾಳ : ಭಗವಂತನ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಪವಿತ್ರ ರಂಝಾನ್ ಉಪವಾಸ ಕ್ಕೆ ಹೆಚ್ಚು ಮಹತ್ವವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಶುಕ್ರವಾರ ಸಂಜೆ ಆಯೋಜನೆ ಮಾಡಲಾಗಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಸಾಮಾಜಿಕ ಸಾಮರಸ್ಯ, ಸೌಹಾರ್ದದ ಸಂಕೇತವಾಗಿ ಪ್ರತೀವರ್ಷ ಇಫ್ತಾರ್ ಕೂಟ ಏರ್ಪಡಿಸುತ್ತಿದ್ದು, ಸರ್ವಧರ್ಮದ ಬಂಧುಗಳು ಭಾಗವಹಿಸುತ್ತಿದ್ದಾರೆ. ಸಾಮಾಜಿಕ ಸಾಮರಸ್ಯದ ಸಮಾಜ ಕಟ್ಟುವ ನಿಟ್ಟಿನಲ್ಲಿ ಎಲ್ಲರಿಗೂ ಭಗವಂತನ ಪ್ರೇರಣೆಯಾಗಲಿ ಎಂದವರು ಆಶಯ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ,ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್,ಪದ್ಮಶೇಖರ ಜೈನ್,ಸಾಹುಲ್ ಹಮೀದ್,ಯು.ಪಿ.ಇಬ್ರಾಹಿಂ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ,ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ವೇದಿಕೆಯಲ್ಲಿದ್ದರು.ಮಿತ್ತಬೈಲ್ ಮಸೀದಿಯ ಇರ್ಷಾದ್ ದಾರಿಮಿ ದುವಾ ಪ್ರಾರ್ಥಿಸಿದರು.ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್,ಪ್ರ.ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ, ತಾಪಂ,ಪುರಸಭಾ ಕಾಂಗ್ರೆಸ್ ಸದಸ್ಯರ‌ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು.ಜಿಪಂಸದಸ್ಯ ಚಂದ್ರಪ್ರಕಾಶ ಶೆಟ್ಟಿ ಸ್ವಾಗತಿಸಿದರು.ರಾಜೀವ ಕಕ್ಕೆಪದವು ನಿರೂಪಿಸಿ ವಂದಿಸಿದರು.
More News

ಸಂಗೀತ ಪ್ರೇಮಿಗಳ ಮನಸೆಳೆದ  `ಕೊಂಕಣಿ ಶ್ರೀರಾಮ ಗೀತಾ'
ಸಂಗೀತ ಪ್ರೇಮಿಗಳ ಮನಸೆಳೆದ `ಕೊಂಕಣಿ ಶ್ರೀರಾಮ ಗೀತಾ'
ಮೇ.26: ಕಾಂದಿವಿಲಿ ಪಶ್ಚಿಮದ ಪೆÇಯಿಸರ್ ಜಿಮ್ಖಾನಾ ಮೈದಾನದಲ್ಲಿ
ಮೇ.26: ಕಾಂದಿವಿಲಿ ಪಶ್ಚಿಮದ ಪೆÇಯಿಸರ್ ಜಿಮ್ಖಾನಾ ಮೈದಾನದಲ್ಲಿ
ಬಣ್ಣದ ರಂಗು...ಸಂಸ್ಕಾರದ ಮೆರುಗು ವಿಶೇಷ ಬೇಸಿಗೆ ಶಿಬಿರ ಸಂಪನ್ನ
ಬಣ್ಣದ ರಂಗು...ಸಂಸ್ಕಾರದ ಮೆರುಗು ವಿಶೇಷ ಬೇಸಿಗೆ ಶಿಬಿರ ಸಂಪನ್ನ

Comment Here