Wednesday 14th, May 2025
canara news

ಗತ ಯಕ್ಷವರ್ಷದ ತಿರುಗಟ್ಟಕ್ಕೆ ಮಂಗಳವನ್ನಾಡಿದ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿ

Published On : 11 Jun 2018   |  Reported By : Rons Bantwal


ಸಾಯಿಕೇರ್ ಲಾಜಿಸ್ಟಿಕ್ಸ್ ಪ್ರಾಯೋಜಕತ್ವದಲ್ಲಿ ಪ್ರದರ್ಶಿಸಲ್ಪಟ್ಟ `ವಿದ್ಯುನ್ಮತಿ ಕಲ್ಯಾಣ' ಬಯಲಾಟ
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಜೂ.10: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯು ಗತ ಯಕ್ಷವರ್ಷದ ತಿರುಗಾಟಕ್ಕೆ ಕಳೆದ ಶನಿವಾರ ಸಂಜೆ ಮಂಗಳವನ್ನಾಡಿತು. ವೇಷಭೂಷಣಗಳ ಯಕ್ಷಚೌಕಿಗೆ ಪೂಜೆ ನೆರವೇರಿಸಿದ ಬಳಿಕ ಬಿಲ್ಲವರ ಭವನದ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಪೂಜೆ ನೆರವೇರಿಸಿ ಆರತಿಗೈದ ಮಂಡಳಿ ಸದಸ್ಯರು ಹಾಗೂ ಯಕ್ಷಕಲಾವಿದರು ಕೊನೆಯಲ್ಲಿ ಸಾಯಿಕೇರ್ ಲಾಜಿಸ್ಟಿಕ್ಸ್ ಸಂಸ್ಥೆಯ ಸುರೇಂದ್ರ ಎ.ಪೂಜಾರಿ ಪರಿವಾರದ ಪ್ರಾಯೋಜಕತ್ವದಲ್ಲಿ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯು `ವಿದ್ಯುನ್ಮತಿ ಕಲ್ಯಾಣ' ಯಕ್ಷಗಾನ ಬಯಲಾಟ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಅಲ್ಲಿನ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದು ಕರ್ನಾಟಕದ ಗಂಡುಕಲೆ ಯಕ್ಷಗಾನ ಕಲೆಯ ಉಳಿವಿಗೆ ಹಗಳಿರುಲು ಎನ್ನದೆ ಶ್ರಮಿಸುವ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮತ್ತು ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಶ್ರಮ ಹಾಗೂ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯು ಜಯ ಸಿ.ಸುವರ್ಣ ಅವರ ಮಾತೃಶ್ರೀ ದಿ| ಅಚ್ಚು ಸಿ.ಸುವರ್ಣ ಸ್ಮರಣಾರ್ಥ ವಾರ್ಷಿಕವಾಗಿ ಕೊಡಮಾಡುವ ಯಕ್ಷಗಾನ ಕಲಾ ಪ್ರಶಸ್ತಿ ಆಗಲಿ, ಅಸೋಸಿಯೇಶನ್‍ನ ಸಾಂಸ್ಕೃತಿಕ ಉಪಸಮಿತಿ ಆಯೋಜಿಸುತ್ತಿರುವ ಶ್ರೀ ಗುರುನಾರಾಯಣ ತುಳು ನಾಟಕ ಸ್ಪರ್ಧೆ ಅನುಕರನೀಯ. ಒಟ್ಟಾರೆಯಾಗಿ ಈ ಬಿಲ್ಲವರ ಅಸೋಸಿಯೇಶನ್ ವಿಶ್ವದ ಬಿಲ್ಲವರ ಆಸ್ತಿಯಾದರೆ ನಾಡಿನ ಸಮಸ್ತ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಶುಭಾನುಗ್ರಹಿಸಿದರು.

ಅಂತೆಯೇ ಬರುವ ಸೆಪ್ಟೆಂಬರ್‍ನಲ್ಲಿ ಕನ್ಯಾಡಿ ಕ್ಷೇತ್ರದಲ್ಲಿ ಆಯೋಜಿಸಿರುವ ತನ್ನ ಪಟ್ಟಾಭೀಷೇಕ ದಶಮಾನೋತ್ಸವ ಸಂಭ್ರಮ ನಿಮಿತ್ತ ಶ್ರೀರಾಮ ತಾರಕ ಮಂತ್ರ ಯಜ್ಞ ಹಾಗೂ ಧರ್ಮ ಸಂಸದ್‍ನ ಯಶಸ್ಸಿಗೆ ಮುಂಬಯಿವಾಸಿ ತುಳುಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಶ್ರೀಗಳು ಹೆಚ್ಚಿನ ಮಾಹಿತಿಗಾಗಿ ನಿಮ್ಮವರೇ ಆದ ಹಾಗೂ ಭಾರತ್ ಬ್ಯಾಂಕ್‍ನ ನಿರ್ದೇಶಕ ಗಂಗಾಧರ್ ಜೆ.ಪೂಜಾರಿ ಅವರನ್ನು ಸಂಪರ್ಕಿಸುವಂತೆ ತಿಳಿಸಿದರು. ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಮತ್ತು ಅಸೋಸಿಯೇಶನ್‍ನ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಶ್ರೀಗಳಿಗೆ ಫಲಪುಷ್ಫಗಳಿಂದ ಗೌರವಿಸಿದರು.

ಸಭೆಯಲ್ಲಿ ಕನ್ಯಾಡಿ ಕ್ಷೇತ್ರದ ಸಂಚಾಲಕ ಕೃಷ್ಣಪ್ಪ ಪೂಜಾರಿ, ಅಸೋಸಿಯೇಶನ್‍ನ ಪದಾಧಿಕಾರಿಗಳನೇಕರು, ಮಾಜಿ ಅಧ್ಯಕ್ಷ ಎಲ್.ವಿ ಅಮೀನ್, ಮಾಜಿ ಗೌ| ಪ್ರ| ಕೋಶಾಧಿಕಾರಿ ಎನ್.ಎಂ ಸನೀಲ್, ಭಾರತ್ ಬ್ಯಾಂಕ್‍ನ ನಿರ್ದೇಶಕರು ಉಪಸ್ಥಿತರಿದ್ದು ಧಾರ್ಮಿಕ ಉಪಸಮಿತಿ ಕಾರ್ಯದರ್ಶಿ ರವೀಂದ್ರ ಶಾಂತಿ ಮತ್ತು ಬಳಗ ಭಜನೆ ನೆರವೇರಿಸಿತು. ಅಸೋಸಿಯೇಶನ್‍ನ ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ ಜಿ.ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಯಾನಂದ್ ಆರ್.ಪೂಜಾರಿ ಸುಖಾಗಮನ ಬಯಸಿದರು. ಗೌ| ಕಾರ್ಯದರ್ಶಿ ಅಶೋಕ್ ಕುಕ್ಯಾನ್ ಸಸಿಹಿತ್ಲು ಧನ್ಯವದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here