Friday 8th, August 2025
canara news

ಹಳೆ ದ್ವೇಷ ಹಿನ್ನಲೆ -ಯುವಕನೋರ್ವನಿಗೆ ತಂಡದಿಂದ ಹಲ್ಲೆ

Published On : 12 Jun 2018   |  Reported By : canaranews network


ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿರುವ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಕಲ್ಲಡ್ಕದ ಮಾರುಕಟ್ಟೆ ಬಳಿ ಜೂ 11ರ ಸೋಮವಾರ ರಾತ್ರಿ ನಡೆದಿದೆ. ದಾಳಿಯಲ್ಲಿ ಹಲ್ಲೆಗೊಳಗಾದ ಯುವಕನನ್ನು ಮೆಲ್ಕಾರ್ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ದಾಳಿ ನಡೆಸಿವರನ್ನು ಕಿರಣ್ ಮೆಲ್ಕಾರ್, ಯೋಗೀಶ್, ಮೋಹನ್, ಕೀರ್ತನ್, ಲೋಕೇಶ್, ವಿದ್ಯಾಧರ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮೆಲ್ಕಾರ್ ಸಮೀಪ ನಡೆದಿದ್ದ ಗುಂಪುಗಳೆರಡರ ನಡುವಿನ ಗಲಾಟೆಯ ಮುಂದುವರಿದ ಭಾಗವಾಗಿ ಈ ದಾಳಿ, ಹಲ್ಲೆ ನಡೆದಿದೆ ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆಯ ವೇಳೆಗೆ ಚೇತನ್ ಕಲ್ಲಡ್ಕ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಗೆ ಬಂದ ಸಂದರ್ಭ ಕಾರಿನಲ್ಲಿ ಆತನನ್ನು ಹಿಂಬಾಲಿಸಿ ಬಂದ ಆರೋಪಿಗಳು ಆತನ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ನಿಂದ ದಾಳಿ ನಡೆಸಿದ್ದಾರೆ . ತಕ್ಷಣ ಅಪಾಯದ ಬಗ್ಗೆ ಅರಿತ ಚೇತನ್ ಅಂಗಡಿಯ ಒಳ ಹೊಕ್ಕ ಕಾರಣ ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಚೇತನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.ಕೋಮು ಸೂಕ್ಷ್ಮ ಪ್ರದೇಶವಾದ ಕಲ್ಲಡ್ಕ ಹಾಗೂ ಇತರ ಆಯಾಕಟ್ಟಿನ ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋ ಬಸ್ತು ಏರ್ಪಡಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here