Wednesday 14th, May 2025
canara news

ಪದೇ ಪದೇ ನನ್ನ ವಿರುದ್ದ ವ್ಯವಸ್ಥಿತ ಅಪಪ್ರಚಾರ ನಡೆಸಲಾಗುತ್ತಿದೆ- ರಮಾನಾಥ ರೈ

Published On : 15 Jun 2018   |  Reported By : canaranews network


ಮಂಗಳೂರು: ಕಾಂಗ್ರೆಸ್ ಮುಖಂಡನೆಂದು ಬಿಂಬಿಸಿಕೊಂಡಿರುವ ಸುರೇಂದ್ರ ಬಂಟ್ವಾಳ್, ತಲ್ವಾರ್ ಝಳಪಿಸಿದ ಪ್ರಕರಣದಲ್ಲಿ ನನ್ನ ಹೆಸರನ್ನು ವಿನಾ ಕಾರಣ ದುರ್ಬಳಕೆ ಮಾಡಲಾಗಿದೆ. ತಲ್ವಾರ್ ಹಿಡಿದು ಹಲ್ಲೆ ಮಾಡಿದ ಸುರೇಂದ್ರ ಬಂಟ್ವಾಳ್ ನನ್ನ ಬಂಟನಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರನ್ನು ಬಿಜೆಪಿಯರು ಅಪಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಜೂ.14 ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,ಸುಖಾಸುಮ್ಮನೇ ನನ್ನ ವಿರುದ್ಧ ಷಡ್ಯಂತ್ರ ಹೆಣೆಯಲಾಗಿದೆ. ಇದರ ಹಿಂದೆ ಕೆಲವೊಂದು ವ್ಯಕ್ತಿಗಳ ಕುತಂತ್ರ ಇದೆ ಎಂದು ಆರೋಪಿಸಿದರು. ಕಾಂಗ್ರೆಸ್ ನ ಸೋಲಿಗೆ ಬಿಜೆಪಿಯವರು ನಡೆಸಿದ ಅಪಪ್ರಚಾರ ಕಾರಣ . ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕವೂ , ನನ್ನ ಹೆಸರನ್ನು ಪದೇ ಪದೇ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಸತ್ಯ ಅರಿತು ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ.ಕಲ್ಲಡ್ಕ ಬಿಸಿಯೂಟ ಸ್ಥಗಿತಗೊಳಿಸಿದ ಹಾಗೂ ಶರತ್ ಮಡಿವಾಳ ಪ್ರಕರಣಗಳಲ್ಲೂ ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳಲಾಯಿತು. ಈಗ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲೂ ಅಪಪ್ರಚಾರ ಮಾಡಲಾಗುತ್ತಿದೆ. ನನಗೇ ಸಂಬಂಧವಿಲ್ಲದ ವ್ಯಕ್ತಿಗಳು ಮಾಡಿದ ಕೃತ್ಯಗಳನ್ನು ನನಗೆ ತಳಕು ಹಾಕಲಾಗುತ್ತಿದೆ ಎಂದು ರಮಾನಾಥ ರೈ ಆರೋಪಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here