Thursday 25th, April 2024
canara news

ಮಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ – ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು

Published On : 23 Jun 2018   |  Reported By : canaranews network


ಮಂಗಳೂರು: ಮಂಗಳೂರಿನ ಪಂಪ್ವೆಲ್ನಲ್ಲಿರುವ ಲಾಡ್ಜ್ವೊಂದಕ್ಕೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪಂಪ್ವೆಲ್ನಲ್ಲಿರುವ ಅನ್ನಪೂರ್ಣ ಹೊಟೇಲ್ ಹಾಗೂ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಬಾಂಗ್ಲಾ ಮೂಲದ ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅನ್ನಪೂರ್ಣ ಹೊಟೇಲ್ ಹಾಗೂ ಲಾಡ್ಜ್ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿನ ರಹಸ್ಯ ಕೊಠಡಿಯಲ್ಲಿ ಯುವತಿಯರನ್ನು ಕೂಡಿ ಹಾಕಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ವೇಳೆ 6 ಯುವತಿಯರು ಪತ್ತೆಯಾಗಿದ್ದು, ನಾಲ್ಕು ಯುವತಿಯರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೈಲ್ಡ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನಿವಾಸಿ ಪವನ್(26) ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ಆರೋಪಿ ಶಿವರಾಮ ಪೂಜಾರಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಈ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here