Wednesday 14th, May 2025
canara news

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನಿರಂತರ ಮಳೆ - ಸ್ಥಳಕ್ಕೆ ತಹಶೀಲ್ದಾರ್ ಭೇಟಿ

Published On : 27 Jun 2018   |  Reported By : Rons Bantwal


ಬಂಟ್ವಾಳ: ಬೆಳಿಗ್ಗೆ ಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಮತ್ತು ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಿ ಬೆಟ್ಟು ಎಂಬಲ್ಲಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಸರಾಗವಾಗಿ ಹರದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಇದ್ದ ಚರಂಡಿ ಯು ಹೂಳು‌ತುಂಬಿದೆ ಹಾಗಾಗಿ ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಪುರಸಭೆ ಮತ್ತು ಅಮ್ಟಾಡಿ ಗ್ರಾಮ ಪಂಚಾಯತ್ ದೊಡ್ಡ ದೊಡ್ಡ ವಸತಿ ಸಮುಚ್ಚಯ ಗಳಿಗೆ ತಗ್ಗು ಪ್ರದೇಶಗಳಲ್ಲಿ ಕಟ್ಟಲು ಅನುಮತಿ‌ನೀಡಿದೆ ಆದರೆ ಇಂತಹ ಸಂದರ್ಭಗಳಲ್ಲಿ ಸಮಸ್ಯೆಗಳು ಉದ್ಭವವಾಗದಂತೆ ಮಾತ್ರ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕ ರು ಆರೋಪ ವ್ಯಕ್ತಪಡಿಸುತ್ತಿದ್ದಾರೆ.‌

ಸ್ಥಳಕ್ಕೆ ತಹಶೀಲ್ದಾರ್ ಸಂತೋಷ್ ಜಿ., ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ನವೀನ್ ಬೆಂಜನಪದವು , ಪುರಸಭೆಯ ಅಧ್ಯಕ್ಷ ರಾಮಕ್ರಷ್ಞ ಆಳ್ವ, ಪುರಸಭಾ ಸದಸ್ಯರಾದ ಜಗದೀಶ ಕುಂದರ್ , ದೇವದಾಸ ಶೆಟ್ಟಿ, ಗಂಗಾದರ್ ಇಂಜಿನಿಯರ್, ಡೊಮಿನಿಕ್ ಡಿ ಮಿಲ್ಲೋ ಗ್ರಾಮ ಲೆಕ್ಕಾಧಿಕರಿ ಶಿವಾನಂದ ನಾಟೇಕಾರ್ ಸಿಬ್ಬಂದಿ ಸದಾಶಿವ ಕೈಕಂಬ .ಶಿವ ಪ್ರಸಾದ‬ ಭೇಟಿ.

ಬಂಟ್ವಾಳ ಅಗ್ನಿ ಶಾಮಕ ದಳ ಸ್ಥಳದಲ್ಲಿ ದ್ದು ಮುನ್ನೇಚರಿಕಾ ಕ್ರಮಗಳನ್ಮು ಕೈಗೊಂಡಿದೆ. ಪುರಸಭಾ ಇಲಾಖೆ ಜೆಸಿಬಿಗಳನ್ನು ಬಳಸಿ ಚರಂಡಿ ಹೂಳೆತ್ತುವ ಕೆಲಸ ಮಾಡುತ್ತಿದೆ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here