ಮುಂಬಯಿ, ಜು.01: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಯುವಾಭ್ಯುದಯ ಉಪ ಸಮಿತಿಯು ಇದೇ ಜುಲೈ.01ರ ಭಾನುವಾರ ಅಪರಾಹ್ನ 1.30 ಗಂಟೆಗೆ ಸಾಂತಾಕ್ರೂಜ್‍ನ ಬಿಲ್ಲವರ ಭವನದ ಸಭಾಗೃಹದಲ್ಲಿ `ವ್ಹಾಯ್ಸ್ ಆಫ್ ಬಿಲ್ಲವ' ಕಾರ್ಯಕ್ರಮದ ಅಂತಿಮ ಸುತ್ತಿನ ಸ್ಪರ್ಧೆ ನಡೆಸಲಿದೆ.
ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಉದ್ಘಾಟಿಸಲಿದ್ದು ಗುಜರಾತ್ ಬಿಲ್ಲವ ಸಂಘದ ಅಧ್ಯಕ್ಷ ಮನೋಜ್ ಸಿ.ಪೂಜಾರಿ ಮುಖ್ಯ ಅತಿಥಿsಯಾಗಿ ಆಗಮಿಸುವರು ಎಂದು ಯುವಾಭ್ಯುದಯ ಉಪ ಸಮಿತಿ ಮುಖ್ಯಸ್ಥ ನಿಲೇಶ್ ಪೂಜಾರಿ ಪಲಿಮಾರ್ ತಿಳಿಸಿದ್ದಾರೆ.
ಈ ಪ್ರತಿಭಾಸ್ಪರ್ಧಾ ಕಾರ್ಯಕ್ರಮದಲ್ಲಿ ಹೆಚ್ಚಿನ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಯುವಾಭ್ಯುದಯದ ಗೌ| ಕಾರ್ಯದರ್ಶಿ ಉಮೇಶ್ ಎನ್.ಕೋಟ್ಯಾನ್ ಮತ್ತು ಅಸೋಸಿಯೇಶನ್‍ನ ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ್ ಜಿ. ಅಂಚನ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.