Wednesday 14th, May 2025
canara news

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸ್ಪರ್ಧೆಗೆ ರಮಾನಾಥ್ ರೈ ಕಣ್ಣು

Published On : 02 Jul 2018   |  Reported By : canaranews network


ಮಂಗಳೂರು: ವಿಧಾನ ಸಭಾ ಚುನಾವಣೆಯಲ್ಲಿ ಸೋತ ಬಳಕ ಮಾಜಿ ಸಚಿವ ರಮಾನಾಥ್ ರೈ ಸ್ವಲ್ಪ ಸಮಯದ ಬಿಡುವಿನ ಬಳಿಕ ರಾಜಕೀಯವಾಗಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸೋಲಿನ ಕಾರಣ ಗಳ ಬಗ್ಗೆ ವಿಮರ್ಶೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದ ಲೋಕ ಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿ.ಜನಾರ್ದನ ಪೂಜಾರಿ ಭಾರೀ ಮತಗಳ ಅಂತರದಿಂದ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಎದುರು ಪರಾಭವಗೊಂಡಿದ್ದರು.

ಈ ಕ್ಷೇತ್ರವನ್ನು ಕೈವಶ ಪಡಿಸಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ 1991ರಿಂದ ಅದು ಸಾಧ್ಯವಾಗಿಲ್ಲ. 1977 ರಿಂದ 1989ರ ವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಜನಾರ್ದನ ಪೂಜಾರಿ ಸತತವಾಗಿ ಜಯ ಗಳಿಸಿ ಕಾಂಗ್ರೆಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು.1991ರ ಬಳಿಕ ಹಿಂದುತ್ವದ ಅಲೆ ಜಿಲ್ಲೆಯಲ್ಲಿ ಬೀಸಿದ ಪರಿಣಾಮ ಚಿತ್ರಣವೇ ಬದಲಾಯಿತು. 1991 ರ ಬಳಿಕ ಈ ಕ್ಷೇತ್ರ ಬಿಜೆಪಿ ವಶವಾಯಿತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಸೋಲುತ್ತಿದೆ. ಈ ಕ್ಷೇತ್ರದಿಂದ ಮತ್ತೆ ಜನಾರ್ದನ ಪೂಜಾರಿ ಸ್ಪರ್ಧಿಸುವುದು ಅನುಮಾನ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಲವು ಮುಖಂಡರು ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ವಂಚಿತ ಯುವ ಮುಖಂಡ ಮಿಥುನ್ ರೈ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ರಮಾನಾಥ್ ರೈ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತ ಪಡಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here