Monday 7th, July 2025
canara news

ಶಿರಾಡಿ ಘಾಟ್ ಸಂಚಾರ ಮುಕ್ತ ವಿಳಂಬ

Published On : 02 Jul 2018   |  Reported By : canaranews network


ಮಂಗಳೂರು: ಶಿರಾಡಿ ಘಾಟ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಸಂಚಾರಕ್ಕೆ ಮುಕ್ತವಾಗುವ ದಿನ ಇನ್ನೂ ದೂರವಾಗಿದೆ.ಈ ಹಿಂದೆ ಜುಲೈ 5ರಂದು ಶಿರಾಡ್ ಘಾಟ್ ನಲ್ಲಿ ವಾಹನ ಸಂಚಾರ ಆರಂಭವಾಗಲಿದೆ ಎನ್ನಲಾಗಿತ್ತು. ಆದರೆ, ಕಾಮಗಾರಿ ಪೂರ್ಣಗೊಂಡಿದ್ದರೂ, ತಡೆಗೋಡೆ ಕಾಮಗಾರಿ ಬಾಕಿ ಇರುವುದರಿಂದ ಜುಲೈ 15ರಿಂದ ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು.

ಶನಿವಾರ ಮಂಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಭೆಯಲ್ಲಿ ಅವರು ಈ ವಿವರ ನೀಡಿದರು.ಸದ್ಯಕ್ಕೆ 12.30 ಕಿಲೋಮೀಟರ್ ನ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದಿರುವ 380 ಮೀಟರ್ ನ ಕಾಮಗಾರಿ ನಡೆಯುತ್ತಿದೆ . ವಾಹನ ಸಂಚಾರ ಸುರಕ್ಷತಾ ಕ್ರಮಗಳಾದ ರಸ್ತೆಯ ಎರಡೂ ಬದಿಯಲ್ಲಿ ಶೋಲ್ಡರ್ ನಿರ್ಮಾಣ, ತಡೆಗೋಡೆ ನೀರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಅವರು ವಿವರಿಸಿದರು.ಇದರಿಂದ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟಿ ರಸ್ತೆ ಜುಲೈ 15ರಿಂದ ವಾಹನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಸೆಂಥಿಲ್ ತಿಳಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here