Friday 26th, April 2024
canara news

ಮಳೆಬಾಧಿತ ಪ್ರದೇಶಕ್ಕೆ ಭೇಟಿ ಕೊಟ್ಟ ಸಂಸದ ನಳಿನ್

Published On : 08 Jul 2018   |  Reported By : canaranews network


ಮಂಗಳೂರು: ಮಂಗಳೂರು ಹೊರವಲಯದ ಮೂಲ್ಕಿ ಬಳಿಯ ಇತಿಹಾಸ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೆರೆ ನೀರು ನುಗ್ಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ.

ಬೆಂಗಳೂರು ಮೂಲಕ ಜಾರ್ಖಂಡ್ ರಾಜ್ಯದ ರಾಂಚಿಗೆ ಅಧ್ಯಯನ ಪ್ರವಾಸಕ್ಕೆಂದು ತೆರಳುತ್ತಿದ್ದ ನಳಿನ್ ಕುಮಾರ್ ನಿನ್ನೆ ರಾತ್ರಿಯೇ ಪ್ರವಾಸ ಮೊಟಕುಗೊಳಿಸಿ, ಜಿಲ್ಲೆಗೆ ಆಗಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಪ್ರವಾಸ ರದ್ದುಗೊಳಿಸಿ ಇಂದು ಮಂಗಳೂರು ತಾಲೂಕಿನ ಮೂಲ್ಕಿ ಭಾಗದ ಮಳೆ ಪೀಡಿತ ಪ್ರದೇಶಕ್ಕೆ ತೆರಳಿದ್ದಾರೆ.

ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಶಾಂಭವಿ ನದಿ ಉಕ್ಕಿ ಹರಿದಿದ್ದು, ಹಲವೆಡೆ ತಗ್ಗುಪ್ರದೇಶಗಳಿಗೆ ನೆರೆ ನೀರು ನುಗ್ಗಿತ್ತು. ಬಪ್ಪನಾಡು ಕ್ಷೇತ್ರದ ಒಳಗೆ ನುಗ್ಗಿದ್ದ ನೀರು ಇಂದು ಬೆಳಗ್ಗೆಯೂ ಅಂಗಣದಲ್ಲಿ ಉಳಿದುಕೊಂಡಿತ್ತು. ಇದೇ ವೇಳೆ ಕಟೀಲು ದೇವಸ್ಥಾನ ಬಳಿ ಶಾಂಭವಿ ನದಿ ಧುಮ್ಮಿಕ್ಕಿ ಹರಿಯುತ್ತಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here