Sunday 5th, May 2024
canara news

ಮಂಗಳೂರಿನ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಇಬ್ಬರ ಸೆರೆ

Published On : 13 Jul 2018   |  Reported By : canaranews network


ಮಂಗಳೂರು: ಬಾಡಿಗೆ ಮನೆಯಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಮಂಗಳೂರು ಹೊರವಲಯದ ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಡುಬಿದ್ರೆಯ ಸಜಿತ್ ಶೇಖರ್ (30) ಎಂದು ಗುರುತಿಸಲಾಗಿದೆ.ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು 5 ಮೊಬೈಲ್ ಫೋನ್ ಗಳನ್ನು ಹಾಗೂ 15,240 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆ ಮನೆ ಪಡೆದು ಬಂಧಿತ ಮಹಿಳೆಯ ಸಹಾಯದಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ಹೇಳಲಾಗಿದೆ .




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here