Wednesday 14th, May 2025
canara news

ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ:ಆರೋಪಿ ಬಂಧನ

Published On : 16 Jul 2018   |  Reported By : canaranews network


ಮಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನೊರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸತೀಶ್ ಎಂದು ಗುರುತಿಸಲಾಗಿದೆ. ಕಳೆದ 2017 ಡಿಸೆಂಬರ್ ನಿಂದ ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಸತೀಶ ತನ್ನ ಮನೆಯ ಸಮೀಪದಲ್ಲಿ ಪರಿಚಯದ ಬಾಲಕಿಯನ್ನು ತನ್ನ ಸ್ನೇಹಿತನ ಮನೆಯೊಂದಕ್ಕೆ ಕರೆದು ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಆಕೆಯನ್ನು ಬೆದರಿಸಿ ಹಲವಾರು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ.ಆದರೆ ಇತ್ತೀಚೆಗೆ ಬಾಲಕಿ ಮುಟ್ಟಾಗದೆ ಇರುವ ವಿಚಾರ ಮನೆಯವರಿಗೆ ತಿಳಿದು ಬಾಲಕಿಯ ಮೇಲೆ ನಿರಂತರ ನಡೆದ ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿದೆ.

ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕುರಿತು ವಿಚಾರಣೆ ನಡೆಸಿದ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here