Friday 3rd, May 2024
canara news

ಜನರ ಖಾತೆಗೆ ಮೋದಿ ಈಗ 15 ಲಕ್ಷದ ಬದಲು 30 ಲಕ್ಷ ಹಾಕಬೇಕು'; ರೈ

Published On : 19 Jul 2018   |  Reported By : canaranews network


ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿ ಎಂದರೆ ಭಾರತೀಯ ಜೂಟ್ (ಸುಳ್ಳು) ಪಾರ್ಟಿ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕ ಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಹೊರಗಿರುವ ಕಪ್ಪು ಹಣವನ್ನು ತರುವುದಾಗಿ ಬಡಾಯಿ ಕೊಚ್ಚಿದ್ದ ನರೇಂದ್ರ ಮೋದಿ ಅವರು ಈವರೆಗೆ ಕಪ್ಪುಹಣ ತಂದಿಲ್ಲ ಎಂದರು.

ಕಪ್ಪು ಹಣ ತಂದರೆ ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಮೋದಿ ತಿಳಿಸಿದ್ದರು. ಆದರೆ ಈವರೆಗೆ ಒಂದು ನಯಾಪೈಸೆ ಜನರ ಖಾತೆಗೆ ಬಂದಿಲ್ಲ. ಈ ಹಿಂದೆ ಶೇಕಡಾ 44ರಷ್ಟಿದ್ದ ಕಪ್ಪು ಹಣ ಈಗ ಶೇಕಡಾ 88ಕ್ಕೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು 15 ಲಕ್ಷದ ಬದಲು ಜನರ ಖಾತೆಗೆ 30 ಲಕ್ಷ ಹಾಕಬೇಕು ಎಂದು ವ್ಯಂಗ್ಯವಾಡಿದರು.ಕೇಂದ್ರ ಸರಕಾರ ಎಲ್ಲ ಕ್ಷೇತ್ರಗಳಲ್ಲಿ ವೈಫಲ್ಯ ಕಂಡಿದೆ. ದೇಶದಲ್ಲಿ ಪೆಟ್ರೋಲ್, ಅಡುಗೆ ಅನಿಲ ದರ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here