Wednesday 14th, May 2025
canara news

ದುಬಾಯಿ ವಿಶ್ವ ತುಳು ಪರ್ಬ: ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಮ್ಮೇಳನ ಸಮಿತಿ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಅವರಿಂದ ಆಹ್ವಾನ

Published On : 24 Jul 2018   |  Reported By : Rons Bantwal


ಮುಂಬಯಿ, ಜು.24: ಅರಬ್ ಸಂಯುಕ್ತ ಸಂಸ್ಥಾನದ ದುಬಾಯಿ ಅಲ್ಲಿನ ಆಲ್ ನಸಾರ್ ಲೀಸರ್ ಲ್ಯಾಂಡ್ ಐಸ್‍ರಿಂಗ್ ಒಳಾಂಗಣ ಕ್ರೀಡಾಂಗಣದಲ್ಲಿ ಬರುವ ನವೆಂಬರ್ 23-24ರ ಎರಡು ದಿನಗಳಲ್ಲಿ ಡಾ| ಬಿ.ಆರ್ ಶೆಟ್ಟಿ ಘನಾಧ್ಯಕ್ಷತೆಯಲ್ಲಿ ನಡೆಸಲುದ್ದೇಶಿಸಿದ ವಿದೇಶದ ಪ್ರಪ್ರಥಮ ವಿಶ್ವ ತುಳು ಸಮ್ಮೇಳನ ಉದ್ಘಾಟಿಸುವರೇ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ವಿಶ್ವ ತುಳುವರೆ ಪರ್ಬ ಸಮಿತಿ ಗೌರವಾಧ್ಯಕ್ಷ, ಪದ್ಮಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಅವರನ್ನೊಳಗೊಂಡು ಸಾಂಪ್ರದಾಯಿಕ ಆಹ್ವಾನ ನೀಡಲಾಯಿತು.

ಇಂದಿಲ್ಲಿ ಸೋಮವಾರ ಬೆಳಿಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿನ ಕಚೇರಿಯಲ್ಲಿ ಡಾ| ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಗೈದ ಸಮ್ಮೇಳನ ಸಲಹಾ ಸಮಿತಿ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಸಮ್ಮೇಳನದ ಪ್ರಸ್ತಾವನೆಗೈದು ಸಮ್ಮೇಳನ ಉದ್ಘಾಟಿಸುವಂತೆ ಆಮಂತ್ರಣವನ್ನೀಡಿ ಭಕ್ತಿಪೂರ್ವಕವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕರ ರಾಜ್ಯ ತುಳು ಅಕಾಡಮಿ ಅಧ್ಯಕ್ಷ ಎ.ಸಿ ಭಂಡಾರಿ, ಅಖಿಲಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಗೌ| ಪ್ರ| ಕಾರ್ಯದರ್ಶಿ ನಿಟ್ಟೆ ಶಶಿಧರ್ ಶೆಟ್ಟಿ, ಎಸ್.ಕೆ ಶ್ರೀಯಾನ್ ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here