Thursday 2nd, May 2024
canara news

ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ

Published On : 30 Jul 2018   |  Reported By : canaranews network


ಮಂಗಳೂರು : ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ ರಾಮಾನುಗ್ರಹ ಕಟ್ಟಡದಲ್ಲಿರುವ ಎಮ್ /ಎಸ್ ಲೋಟಸ್ ಸಲೂನ್ ಎಂಡ್ ವೆಲ್ ನೆಸ್ ಎಂಬ ಹೆಸರಿನ ಮಸಾಜ್ ಸೆಂಟರ್ ಗೆ ಸಿಸಿಬಿ ಪೊಲೀಸರು ಹಾಗೂ ಕಾವೂರು ಠಾಣಾ ಪೊಲೀಸರು, ದಾಳಿ ನಡೆಸಿ ಮಹಿಳಾ ಪಿಂಪ್ ಓರ್ವಳನ್ನು ವಶಕ್ಕೆ ಪಡೆದಿದ್ದಾರೆ.

ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಮಸಾಜ್ ಹೆಸರಿನಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದು, ಮಸಾಜ್ ಸೆಂಟರ್ ನಲ್ಲಿದ್ದ 5 ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಮಸಾಜ್ ಸೆಂಟರ್ ನ್ನು ನಡೆಸುತ್ತಿದ್ದ ರಾಜೇಶ್, ಸತೀಶ್ ಮತ್ತು ಜಯರಾಜ್ ತಲೆಮರೆಸಿಕೊಂಡಿದ್ದು ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತರಾಮ, ಕಾವೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ. ಆರ್ ನಾಯ್ಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here