Wednesday 14th, May 2025
canara news

ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳ “ಆಟಿ ಕೂಟ ಕಾರ್ಯಕ್ರಮ”

Published On : 03 Aug 2018   |  Reported By : Rons Bantwal


ದಿನಾಂಕ.28.07.2018 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ಆಟಿಕೂಟ ಕಾರ್ಯಕ್ರಮವನ್ನು ಮಹೋತ್ಸವ ಸಭಾಭವನದಲ್ಲಿ ನಡೆಸಲಾಯಿತು.

 

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಯೋಜನೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯ ಜೊತೆಗೆ ಇತರೆ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು. ಕೆಲಸದ ಜೊತೆಗೆ ಮನರಂಜನೆಯು ಇದ್ದಾಗ ಜೀವನ ಪರಿಪೂರ್ಣವಾಗುವುದೆಂದು ತಿಳಿಸಿದರು.

ಸಿಬ್ಬಂದಿಗಳಿಗೆ ಆಟೋಟ ಸ್ಪರ್ಧೆಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ, ವೈವಿಧ್ಯಮಯ ಸೊಪ್ಪುಗಳ ಪ್ರದರ್ಶನ, ತುಳುನಾಡಿನ ಸಾಂಪ್ರದಾಯವನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಹೇಮಾವತಿ ವೀ ಹೆಗ್ಗಡೆ ಹಾಗೂ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್‍ರವರು ತಿಂಡಿ ತಿನಿಸುಗಳ ಪ್ರದರ್ಶನ, ಪ್ರಾಚೀನ ವಸ್ತುಗಳ ಪ್ರದರ್ಶನವನ್ನು ವೀಕ್ಷಿಸಿ ಸಿಬ್ಬಂದಿಗಳನ್ನು ಹಾರೈಸಿದರು.

ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್.ಎಚ್.ಮಂಜುನಾಥ್‍ರವರು ಮಾತನಾಡುತ್ತಾ ಆಟಿಯ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಹಾಗೂ ಬಾಲ್ಯದ ದಿನಗಳ ಆಟೋಟಗಳನ್ನು ನೆನಪು ಮಾಡಿಕೊಂಡು ಇವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಹೋಗುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಯೋಜನೆಯ ಕೇಂದ್ರಕಚೇರಿಯ ಎಲ್ಲಾ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು, ಎಲ್ಲಾ ಸಿಬ್ಬಂದಿಗಳು, ಶ್ರೀಕ್ಷೇತ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here