Saturday 20th, April 2024
canara news

ಸಂತ ಫಿಲೋಮಿನಾ ಕಾಲೇಜು ಕಛೇರಿ ಅಧೀಕ್ಷಕ ವಿಕ್ಟೋರಿಯನ್ ಫೆರ್ನಾಂಡಿಸ್ ನಿಧನ

Published On : 09 Aug 2018   |  Reported By : Prof Dinakara Rao


ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಕಛೇರಿ ಅದೀಕ್ಷಕರಾದ ವಿಕ್ಟೋರಿಯನ್ ಫೆರ್ನಾಂಡಿಸ್ ಅಲ್ಪ ಕಾಲದ ಅನಾರೋಗ್ಯದಿಂದಾಗಿ ಆಗಸ್ಟ್ 9 ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಣಿಯೂರಿನ ಕೊಡಂಬರಕಜೆ ಎಂಬಲ್ಲಿ 1963 ರ ಮಾರ್ಚ್ 23 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಗೇರುಕಟ್ಟೆ, ಹೈಸ್ಕೂಲ್ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಿಕಾಮ್ ಪದವಿಯನ್ನು ಗುಜರಾತ್ ವಿಶ್ವವಿದ್ಯಾನಿಲಯದಿಂದ ಪಡೆದು, ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಆಡಳಿತಕ್ಕೊಳಪಡುವ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 1985 ರಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು.

 

ನಂತರ 1993ರಲ್ಲಿ ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿಗೆ ವರ್ಗಾವಣೆಗೊಂಡ ಇವರು ಹತ್ತೊಂಬತ್ತು ವರ್ಷಗಳ ಸೇವೆ ಸಲ್ಲಿಸಿ, 2012ರ ಜುಲೈ 2 ರಿಂದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಛೇರಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.ಇವರು ತಮ್ಮ ವೃತ್ತಿ ಜೀವನದಲ್ಲಿ ಮಂಗಳೂರು ವಿವಿ ಮಟ್ಟದ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ಆಡಳಿತ ಸಿಬ್ಬಂದಿಗಳ ಸಂಘದ ನಾಯಕತ್ವ ವಹಿಸಿ ಹಲವಾರು ರೀತಿಯ ರಾಷ್ಟ್ರೀಯ ಮಟ್ಟದ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಯೋಜಿಸಿದ್ದರು. ಹಾಗೆಯೇ ಅಖಿಲ ಭಾರತ ಮಟ್ಟದಲ್ಲಿ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳ ಆಡಳಿತ ಸಿಬ್ಬಂದಿ ಸಂಘದ ದಕ್ಷಿಣ ವಲಯ ಮಟ್ಟದಲ್ಲಿ ಕಾರ್ಯದರ್ಶಿಯಾಗಿದ್ದುಕೊಂಡು ಕಾರ್ಯಕಾರಿ ಸಮಿತಿ ಸಭೆಗಳನ್ನೂ ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಯೋಜಿಸಿದ್ದರು. ತಮ್ಮ 33 ವರ್ಷಗಳ ವೃತ್ತಿ ಜೀವನದಲ್ಲಿ ಶಿಸ್ತು, ದಕ್ಷತೆ ಮತ್ತು ಬದ್ಧತೆಗೆ ಹೆಸರು ಗಳಿಸಿದ್ದ ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ ಸೂಚಕ ಸಭೆ: ಸಂತ ಫಿಲೋಮಿನಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಲ್ಲಾ ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಒಟ್ಟು ಸೇರಿ ನಿಧನ ಹೊಂದಿದ ಕಾಲೇಜಿನ ಅಧೀಕ್ಷಕ ವಿಕ್ಟೋರಿಯನ್ ಫೆರ್ನಾಂಡಿಸ್‍ರಿಗೆ ಆಗಸ್ಟ್ 9 ರಂದು ಮುಂಜಾನೆ ಸಂತಾಪ ಸೂಚಕ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕರಾದ ಅತಿ ವಂ. ಆಲ್ಫ್ರೆಡ್ ಜೆ ಪಿಂಟೊ, ಕ್ಯಾಂಪಸ್ ನಿರ್ದೇಶಕರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಂ. ವಿಜಯ್ ಲೋಬೊ, ಕಾಲೇಜು ಕಛೇರಿಯ ಹಿರಿಯ ಸಿಬ್ಬಂದಿ ಲುವಿಸ್ ಡಿ’ಸೋಜ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ವಂ.

ರಿತೇಶ್ ರೋಡ್ರಿಗಸ್ ಮಾತನಾಡಿ, ಶೃದ್ಧಾಂಜಲಿಯನ್ನು ಅರ್ಪಿಸಿದರು.

ಅಂತ್ಯಕ್ರಿಯೆಯ ವಿಧಿ ವಿಧಾನಗಳು ಸುರತ್ಕಲ್‍ನ ಸೇಕ್ರೆಡ್ ಹಾರ್ಟ್ ಚರ್ಚ್‍ನಲ್ಲಿ ಸಾಯಂಕಾಲ ಘಂಟೆ 3.30 ಕ್ಕೆ ನಡೆಲಿದೆ ಎಂದು ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here