Wednesday 14th, May 2025
canara news

ಕರಾವಳಿ ಪ್ರಕೃತಿ ವಿಕೋಪ ಹಾನಿಗೆ ಶಾಶ್ವತ ಪರಿಹಾರ ಕ್ರಮ: ಎಚ್ ಡಿ ಕೆ ಭರವಸೆ

Published On : 16 Aug 2018   |  Reported By : canaranews network


ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಭೂಕುಸಿತ, ಪ್ರಾಕೃತಿಕ ತೊಂದರೆಗಳು ಗಮನಕ್ಕೆ ಬಂದಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡುವ ಕುರಿತು ಗಮನಹರಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭರವಸೆ ನೀಡಿದರು.ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಟುಂಬಸ್ಥರು ಮಂಗಳವಾರ ಸುಬ್ರಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ, ಅಭಿಷೇಕ, ತುಲಾಭಾರ ಸೇವೆ ನೆರವೇರಿಸಿದರು. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಿದರು.ಬಳಿಕ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಮಳೆಯ ಕೊರತೆ ಇಲ್ಲ, ಉತ್ತಮ ಮಳೆಯಿಂದಾಗಿ ಜಲಾಶಯಗಳು ತುಂಬಿ ಹರಿಯುತ್ತಿವೆ.

ಲಿಂಗನಮಕ್ಕಿ ಹಣೆಕಟ್ಟಿನ 11 ಬಾಗಿಲುಗಳಲ್ಲಿ 9 ಬಾಗಿಲುಗಳನ್ನು ತೆರೆಯಲಾಗಿದ್ದು, ಈಗಿನ ಒಳ ಹರಿವು ಜಾಸ್ತಿಯಾಗಿದೆ.ಈ ಮಧ್ಯೆ ನಿಗದಿತ ಪ್ರಮಾಣದಲ್ಲಿ ನೀರು ಬಿಡುವಂತೆ ತಮಿಳುನಾಡು ಸರಕಾರ ಖ್ಯಾತೆ ತೆಗಿದಿದೆ ಇದಕ್ಕೆ ಕಾನೂನು ಮೂಲಕ ರಾಜ್ಯ ಸರಕಾರ ಸೂಕ್ತ ಉತ್ತರ ನೀಡಲಿದೆ ಎಂದು ಅವರು ತಿಳಿಸಿದರು. ಮಹದಾಯಿ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾದರೆ ಕಾನೂನು ಮೂಲಕ ಪ್ರಶ್ನಿಸಲಾಗುವುದು ಎಂದರು.ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ನಿರಂತರ ಭಾರೀ ಮಳೆಯಾಗುವ ಸಂಭವವಿರುತ್ತದೆ ಎಂದು ಭಾರತ ಹವಾಮಾನ ಇಲಾಖೆ, ಬೆಂಗಳೂರು ಇವರಿಂದ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ಬಂದಿದೆ. ಅದರಂತೆ ಮುಂದಿನ 24 ಗಂಟೆ ಕರಾವಳಿ ಪ್ರದೇಶದಲ್ಲಿ ಯಾವುದೇ ಮಿನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here